ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೇರ ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

Published : 14 ಫೆಬ್ರುವರಿ 2024, 3:03 IST
Last Updated : 14 ಫೆಬ್ರುವರಿ 2024, 3:03 IST
ಫಾಲೋ ಮಾಡಿ
Comments

ಮಡಿಕೇರಿ: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಹಾಗೂ ಪೌರಕಾರ್ಮಿಕರ ನೇಮಕಾತಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಹೊರಗುತ್ತಿಗೆ ನೌಕರರು ಇಲ್ಲಿನ ನಗರಸಭೆ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪೌರಚಾಲಕರು, ನೀರುಗಂಟಿಗಳು, ಲೋಡರ್ಸ್, ಕ್ಲೀನರ್ಸ್‌, ಹೆಲ್ಪರ್ಸ್‌, ಯುಜಿಡಿ ಕಾರ್ಮಿಕರು ಸೇರಿದಂತೆ ಎಲ್ಲ ಬಗೆಯ ಹೊರಗುತ್ತಿಗೆ ನೌಕರರನ್ನು ನೇರ ವೇತನ ಪಾವತಿ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಪೌರಕಾರ್ಮಿಕರ ಖಾಲಿ ಇರುವ ಹುದ್ದೆಗಳನ್ನು ತುಂಬಬೇಕು. ಇದಕ್ಕಾಗಿ ಸ್ವಚ್ಛತೆ ಮತ್ತು ಕುಡಿಯುವ ನೀರು ಸರಬರಾಜು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದಕ್ಕಾಗಿ ಸಾರ್ವಜನಿಕರು ಸಹಕಾರ ಕೊಡಬೇಕು ಎಂದು ಅವರು ಮನವಿ ಮಾಡಿದರು.

ಅಗತ್ಯಕ್ಕೆ ಅನುಗುಣವಾಗಿ ಪೌರಚಾಲಕ ಹುದ್ದೆಯನ್ನು ಸೃಜಿಸಬೇಕು, ಸಂಕಷ್ಟಭತ್ಯೆಯನ್ನು ನೇರಪಾವತಿ ಮತ್ತು ಗುತ್ತಿಗೆ ಪೌರಕಾರ್ಮಿಕರಿಗೂ ವಿಸ್ತರಿಸಬೇಕು, ಬಾಕಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT