ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ| ಪಿಯು ಪರೀಕ್ಷೆ; ಅಕ್ರಮಕ್ಕೆ ಆಸ್ಪದ ಬೇಡ

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅಧಿಕಾರಿಗಳಿಗೆ ಸೂಚನೆ
Last Updated 7 ಮಾರ್ಚ್ 2023, 6:20 IST
ಅಕ್ಷರ ಗಾತ್ರ

ಮಡಿಕೇರಿ: ‘ಮಾರ್ಚ್ 9 ರಿಂದ 29ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳಿಗೆ ಆಸ್ಪದ ನೀಡಬಾರದು’ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪರೀಕ್ಷೆಯನ್ನು ಸಂಪೂರ್ಣವಾಗಿ ನಿಷ್ಪಕ್ಷಪಾತವಾಗಿ ಹಾಗೂ ಪಾರ ದರ್ಶಕವಾಗಿ ನಡೆಸಲು ಕ್ರಮವಹಿಸ ಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕಾರ್ಯ ನಿರ್ವಹಿಸುತ್ತಿ ರುವ ಬಗ್ಗೆ ಖಚಿತಪಡಿಸಿ ಕೊಳ್ಳಬೇಕು’ ಎಂದು ಅವರು ಹೇಳಿದರು.

‘ಪರೀಕ್ಷೆಗಳನ್ನು ಪಾರದರ್ಶಕತೆ ಯಿಂದ ನಡೆಸಲು ಪ್ರತಿಯೊಂದು ಪರೀಕ್ಷಾ ಕೇಂದ್ರಗಳಿಗೆ ‘ಎ’ ಮತ್ತು ‘ಬಿ’ ಗ್ರೂಪ್ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಿಸಲಾಗುವುದು. ದೂರದ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆಗಳನ್ನು ಸರಿಯಾದ ಸಮಯದಲ್ಲಿ ತಲುಪುವಂತಾಗಬೇಕು. ಹಾಗೆಯೇ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುವ ಮಾರ್ಗಾಧಿಕಾರಿಗಳ ವಾಹನಕ್ಕೆ ಜಿಪಿಎಸ್ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆಯೂ’ ಸೂಚಿಸಿದರು.

‘ಬಸ್ ವ್ಯವಸ್ಥೆ ಸುವ್ಯವಸ್ಥಿತವಾಗಿ ರುವಂತೆ ನೋಡಿಕೊಳ್ಳಬೇಕು. ಸಾರಿಗೆ ವ್ಯವಸ್ಥೆಯ ಲೋಪದಿಂದ ಪರೀಕ್ಷೆ ಬರೆಯಲು ತೊಂದರೆ ಆಯಿತು ಎಂಬ ದೂರು ವಿದ್ಯಾರ್ಥಿಗಳಿಂದ ಕೇಳಿ ಬರದಂತೆ’ ಎಚ್ಚರಿಕೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿ, ‘ಮಡಿಕೇರಿಯಲ್ಲಿ 5, ವಿರಾಜಪೇಟೆಯಲ್ಲಿ 2, ಪೊನ್ನಂಪೇಟೆ ಯಲ್ಲಿ 4, ಸೋಮವಾರ ಪೇಟೆಯಲ್ಲಿ 3, ಕುಶಾಲನಗರದಲ್ಲಿ 5 ಸೇರಿದಂತೆ ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಸುವ್ಯವಸ್ಥಿತ ಪರೀಕ್ಷೆ ನಡೆಸಲು ಕ್ರಮವಹಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಕೆಎಸ್‍ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕಿ ಗೀತಾ ಮಾತನಾಡಿ, ‘ಪರೀಕ್ಷೆಗೆ ತೆರಳುವ ಪರೀಕ್ಷಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ದಲ್ಲಿ ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸ ಬಹುದು ಹಾಗೂ ಬಸ್ ಸಂಚಾರದಲ್ಲಿ ವ್ಯತ್ಯಯವಿರುವ ಕಡೆ ಬಸ್‌ಗಳನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಖಜಾನೆ ಇಲಾಖೆಯ ಉಪ ನಿರ್ದೇಶಕಿ ಪದ್ಮಜಾ, ಡಿವೈಎಸ್‍ಪಿ ಜಗದೀಶ್, ತಹಶೀಲ್ದಾರ್ ಕಿರಣ್, ವಿವಿಧ ಕಾಲೇಜಿನ ಪ್ರಾಂಶುಪಾಲರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT