ಬುಧವಾರ, ಆಗಸ್ಟ್ 17, 2022
25 °C

ಡ್ರಗ್ಸ್‌ ದಂಧೆಯಲ್ಲಿ ಸಚಿವರಿದ್ದರೂ ಒಳಗೆ ಹಾಕಿ: ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Appachu Ranjan

ಮಡಿಕೇರಿ: ‘ಡ್ರಗ್ಸ್‌ ದಂಧೆಯಲ್ಲಿ ಸಚಿವರು ಅಥವಾ ಯಾವುದೇ ಪಕ್ಷದ ಶಾಸಕರಿದ್ದರೂ ಒಳಗೆ ಹಾಕಬೇಕು’ ಎಂದು ಮಡಿಕೇರಿಯ ಬಿಜೆಪಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ ಇಲ್ಲಿ ಹೇಳಿದರು.

‘ನಾಲ್ಕು ಸಿನಿಮಾ ಮಾಡಿರುವ ನಟಿಯರು ಕೋಟ್ಯಂತರ ಮೌಲ್ಯದ ಆಸ್ತಿ ಹೊಂದಿದ್ದಾರೆ. ಅದು ಹೇಗೆ ಸಾಧ್ಯವಾಯಿತು? ಆ ನಟಿಯರ ಸಂಭಾವನೆ ಎಷ್ಟಿತ್ತು ಎಂಬುದರ ಬಗ್ಗೆಯೂ ತನಿಖೆ ಆಗಬೇಕಿದೆ. ಅಕ್ರಮವಾಗಿ ಹಣ ಹಾಗೂ ಆಸ್ತಿ ಸಂಪಾದನೆ ಮಾಡಿದ್ದರೆ ಅದನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಡ್ರಗ್ಸ್‌ ಮಾರಾಟ, ಸೇವನೆ ಮಾಡಿದ್ದವರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು’ ಎಂದೂ ಆಗ್ರಹಿಸಿದರು.

‘ಕೆಲವು ಪೊಲೀಸ್‌ ಅಧಿಕಾರಿಗಳೇ ಗಾಂಜಾ ಮಾರಾಟಗಾರರ ಜೊತೆಗೆ ಶಾಮೀಲಾಗಿದ್ದಾರೆ ಎಂಬ ಮಾಹಿತಿಯಿದೆ. ಪೊಲೀಸರು ಹಣ ಪಡೆದು ‍ಪ್ರಕರಣ ದಾಖಲಿಸಿದೆ ಬಿಟ್ಟು ಕಳುಹಿಸಿದ್ದಾರೆ ಎಂದ ಅವರು, ಡ್ರಗ್ಸ್‌ ದಂಧೆ ಕೊನೆಯಾಗಬೇಕು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು