ನಾಪೋಕ್ಲು: ಗುಣಮಟ್ಟದ ಕಾಫಿ ಉತ್ಪಾದಿಸುವುದರ ಮೂಲಕ ಕಾಫಿ ಬೆಳೆಗಾರರು ಆರ್ಥಿಕವಾಗಿ ಸದೃಢರಾಗಲು ಸಾಧ್ಯ ಎಂದು ಚೆಟ್ಟಳ್ಳಿಯ ಕಾಫಿ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಡಾ.ಎಸ್.ಎ.ನಾಡಫ್ ಹೇಳಿದರು.

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಆಯೋಜಿಸಲಾಗಿದ್ದ ಕಾಫಿ ಬೆಳೆಯ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಜಾಗತಿಕವಾಗಿ ಕಾಫಿಗೆ ಉತ್ತಮ ಬೇಡಿಕೆ ಇದೆ. ಬೆಳೆಗಾರರು ಕಾಫಿ ಕೃಷಿಗೆ ಹೆಚ್ಚಿನ ಕಾಳಜಿ ಉತ್ತಮ ಇಳುವರಿ ಪಡೆಯಲು ಸಾಧ್ಯ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಕಾಫಿ ಸಂಶೋಧನಾ ಸಂಸ್ಥೆ ಚಟ್ಟಳ್ಳಿಯ ವಿಜ್ಞಾನಿ ಡಾ.ಶಿವಲಿಂಗು ಬಿ.ಆರ್, ರೈತ ಸದಸ್ಯರಿಗೆ ಕಾಫಿ ಬೆಳೆಯ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ ಸಂಪನ್ಮೂಲ ವ್ಯಕ್ತಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷನಾಗೇಶ್ ಕುಂದಲ್ಪಾಡಿ ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಅಶೋಕ ಪಿ.ಎಂ, ಪವನ್ ಸಕ್ಡೆನ್ ಕಾಫಿ ಇಂಡಿಯಾ ಲಿಮಿಟೆಡ್ ಕುಶಾಲನಗರದ ಸಂಯೋಜಕಿ ಪ್ರಕೃತಿ ಪೊನ್ನಮ್ಮ, ಉದಯ್ ಕುಮಾರ್ ಉಪಸ್ಥಿತರಿದ್ದರು. ಸಂಘದ ನಿರ್ದೇಶಕ ಹಾಗೂ ಆಸಕ್ತ ರೈತ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.