ಕುಶಾಲನಗರ: ‘ಸರ್ಕಾರಿ ಶಾಲೆ– ಕಾಲೇಜಿನಲ್ಲಿ ಓದಿದ ಅನೇಕರು ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ’ ಎಂದು ವನ್ಯಜೀವಿ ಸಂರಕ್ಷಣಾ ಸಮಿತಿ ಸದಸ್ಯ ಸಂಕೇತ್ ಪೂವಯ್ಯ ಹೇಳಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ‘2023–24ನೇ ಸಾಲಿನಲ್ಲಿ ಸರ್ಕಾರಿ ಪಿಯು ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಉತ್ತಮ ಫಲಿತಾಂಶ ತರಲು ಶ್ರಮಿಸಿದ ಉಪನ್ಯಾಸಕರು ಹಾಗೂ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆ– ಕಾಲೇಜುಗಳು ಖಾಸಗಿ ಸಂಸ್ಥೆಗಳಿಂತ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ. ಸರ್ಕಾರ ಅನೇಕ ಸೌಲಭ್ಯ ಕಲ್ಪಿಸುತ್ತಿದ್ದು, ಇವುಗಳನ್ನು ಸದುಪಯೋಗ ಮಾಡಿಕೊಂಡು ಚೆನ್ನಾಗಿ ಓದಿ, ದೇಶಕ್ಕೆ ಕೀರ್ತಿ ತರಬೇಕು’ ಎಂದು ಸಲಹೆ ನೀಡಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ‘ಸರ್ಕಾರಿ ಶಾಲೆ ಕಾಲೇಜು ವಿದ್ಯಾರ್ಥಿಗಳು ಕಠಿಣ ಪರಿಶ್ರಮದೊಂದಿಗೆ ನಿರಂತರ ಅಧ್ಯಯನ ಕೈಗೊಂಡರೆ ನಿರ್ದಿಷ್ಟ ಗುರಿ ಮುಟ್ಟಲು ಸಾಧ್ಯವಾಗುತ್ತದೆ’ ಎಂದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕೊಡಗು ಘಟಕದ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ ಮಾತನಾಡಿ, ‘ಪ್ರತಿ ವಿದ್ಯಾರ್ಥಿಯಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಅವರಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು’ ಎಂದು ಹೇಳಿದರು.

ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಾಗೇಶ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ವಿ.ಎಂ.ಶರೀನ್, ಸಮಾಜ ಸೇವಕ ಎಂ.ಕೆ.ಕಾವೇರಪ್ಪ, ಸುಂಟಿಕೊಪ್ಪ ಕೂಬ ಮಸೀದಿ ಅಧ್ಯಕ್ಷ ಇಸಾಕ್ ಖಾನ್, ಕದಸಂಸ ವಿಭಾಗೀಯ ಸಂಚಾಲಕ ವಿರಾಜಪೇಟೆ ಎಸ್.ವೀರಭದ್ರಯ್ಯ, ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಹೋಬಳಿ ಸಂಚಾಲಕ ಎಚ್.ಬಿ.ಶಾಂತಪ್ಪ, ಸದಸ್ಯೆ ಮಡಿಕೇರಿ ಪ್ರೇಮಾಕೃಷ್ಣಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.