ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ, ಗಾಳಿ

Last Updated 15 ಜುಲೈ 2022, 4:14 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುರುವಾರ ರಾತ್ರಿ ಇಡೀ ಹಾಗೂ ಶುಕ್ರವಾರ ಬೆಳಿಗ್ಗೆ ಮಳೆ, ಗಾಳಿ ಮುಂದುವರಿದಿದೆ.

ಭಾಗಮಂಡಲದಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನಾಪೋಕ್ಲು- ಭಾಗಮಂಡಲ ರಸ್ತೆ ಹೊಳೆಯಂತಾಗಿದ್ದು, ಸಂಪರ್ಕ ಕಡಿತಗೊಂಡಿದೆ‌. ಭಾಗಮಂಡಲ- ಮಡಿಕೇರಿ ರಸ್ತೆಯಲ್ಲೂ ಒಂದು ಅಡಿಯಷ್ಟು ನೀರು ಹರಿಯುತ್ತಿದೆ.

ಸೋಮವಾರಪೇಟೆ ತಾಲ್ಲೂಕಿನ ದೊಡ್ಡಬ್ಬೂರು ಗ್ರಾಮದ ರೇಖಾ ಅವರ ಮನೆ, ಕುಮಾರಹಳ್ಳಿ ಗ್ರಾಮದ ಎಂ.ಟಿ.ಮೇದಪ್ಪ ಅವರ ಮನೆಗಳಿಗೆ ಹಾನಿಯಾಗಿದೆ.

ಹಾರಂಗಿ ಜಲಾಶಯಕ್ಕೆ 13,603 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, 15,500 ಕ್ಯುಸೆಕ್ ನೀರನ್ನು ನದಿಗೆ ಹೊರಬಿಡಲಾಗುತ್ತಿದೆ.

ಮಡಿಕೇರಿ ತಾಲೂಕಿನ ಬಲ್ಲಮಾವಟಿಯಲ್ಲಿ 15 ಸೆಂ.ಮೀ, ಭಾಗಮಂಡಲದಲ್ಲಿ 14 ಸೆಂ.ಮೀ ಮಳೆ ಸುರಿದಿದೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT