ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಮುಂದುವರಿದ ಮಳೆ

Published 9 ಮೇ 2024, 15:27 IST
Last Updated 9 ಮೇ 2024, 15:27 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಅಲ್ಲಲ್ಲಿ ಗುರುವಾರವೂ ಬಿರುಸಿನಿಂದ ಮಳೆ ಸುರಿದಿದೆ. ಮಡಿಕೇರಿ, ಸುಂಟಿಕೊಪ್ಪ, ನಾಪೋಕ್ಲು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಗೋಣಿಕೊಪ್ಪಲು ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ.

ಗುಡುಗು ಸಿಡಿಲು, ಬಿರುಗಾಳಿಯೊಂದಿಗೆ ಸುರಿದ ಮಳೆಯು ಬಿಸಿಲ ಬೇಗೆಯನ್ನು ಕಡಿಮೆ ಮಾಡಿತು. ಏಳನೇ ಹೊಸಕೋಟೆ, ಕೆದಕಲ್, ಗದ್ದೆಹಳ್ಳ ಭಾಗದಲ್ಲಿ ಹೆಚ್ಚು ಮಳೆ ಸುರಿದಿದೆ.

ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಹಲವೆಡೆ ಹಾನಿ ಸಂಭವಿಸಿದೆ. ಪಟ್ಟಣದಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಗ್ರಾಮೀಣ ಪ್ರದೇಶದಲ್ಲಿ ಗಾಳಿಗೆ ಮರದ ರೆಂಬೆಗಳು ಮುರಿದುಬಿದ್ದಿವೆ. ಕೆಲವು ಭಾಗಗಳಲ್ಲಿ ವಿದ್ಯುತ್ ಕಂಬಗಳು ತುಂಡಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT