ಸಿದ್ದಾಪುರ: ಸಿದ್ದಾಪುರ ಸೇರಿದಂತೆ ಸುತ್ತಮುತ್ತಲ ಭಾಗದಲ್ಲಿ ಸೋಮವಾರ ಭಾರಿ ಮಳೆಯಾಗಿದ್ದು, ಕಾವೇರಿ ನದಿ ದಡದ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ಕರಡಿಗೋಡು-ಚಿಕ್ಕನಹಳ್ಳಿ ರಸ್ತೆ ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ. ನದಿ ದಡದಲ್ಲಿರುವ ಮನೆಗಳ ಸಮೀಪದಲ್ಲಿ ನೀರು ಹರಿಯುತ್ತಿದ್ದು, ಪ್ರವಾಹದ ಭೀತಿ ಉಂಟಾಗಿದೆ.

ಸ್ಥಳಕ್ಕೆ ಕಂದಾಯ ಪರಿವೀಕ್ಷಕ ಅಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ, ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನೀರು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರ ಆರಂಭಿಸಲು ಕಂದಾಯ ಇಲಾಖೆ ಸಿದ್ಧತೆಯನ್ನು ಕೈಗೊಂಡಿದೆ. ಗುಹ್ಯ, ಕೂಡುಗದ್ದೆ ಗ್ರಾಮದಲ್ಲೂ ನದಿ ದಡದ ನಿವಾಸಿಗಳು ಪ್ರವಾಹದ ಭೀತಿ ಎದುರಿಸುತ್ತಿದ್ದಾರೆ.

ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ಬೆಟ್ಟದಕಾಡು, ಕುಂಬಾರಗುಂಡಿ ಹಾಗೂ ಬರಡಿ ವ್ಯಾಪ್ತಿಯಲ್ಲಿ ಕಾವೇರಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕ ಸಂತೋಷ್ ಹಾಗೂ ಗ್ರಾಮ ಆಡಳಿತ ಅಧಿಕಾರಿ ಸಚಿನ್ ಭೇಟಿ ನೀಡಿ, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.

ಭಾರಿ ಗಾಳಿ, ಮಳೆಯಿಂದಾಗಿ ಗುಹ್ಯದಲ್ಲಿ ವಿದ್ಯುತ್ ತಂತಿ ತುಂಡಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಬಳಿಕ ಸಿಬ್ಬಂದಿಗಳು ಸರಿಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.