ಮಡಿಕೇರಿ: ಹುಲಿ ದಾಳಿ ನಿಯಂತ್ರಿಸಲು ಅರಣ್ಯ ಸಚಿವರೇ ದಕ್ಷಿಣ ಕೊಡಗಿಗೆ ಆಗಮಿಸಿ ಹುಲಿ ಕಾರ್ಯಾಚರಣೆಯ ಬಗ್ಗೆ ಸಮಗ್ರ ಚರ್ಚೆ ನಡೆಸಿ, ನರಭಕ್ಷಕ ಹುಲಿಯನ್ನು ಗುಂಡಿಕ್ಕುವ ತೀರ್ಮಾನ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಒತ್ತಾಯಿಸಿದರು.

ಪೊನ್ನಂಪೇಟೆಯ ಪ್ರವಾಸಿ ಮಂದಿರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಡಗಿನ ಶ್ರೀಮಂಗಲ, ಟಿ.ಶೆಟ್ಟಿಗೇರಿ ಹಾಗೂ ಇತರೆಡೆಯಲ್ಲಿ ನರಭಕ್ಷಕ ಹುಲಿಯು ತಿರುಗಾಟ ನಡೆಯುತ್ತಿದೆ. ಕಳೆದ ನಾಲ್ಕು ದಿನಗಳ ಹಿಂದೆ ಕಾಲೇಜು ವಿದ್ಯಾರ್ಥಿನಿಯು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಹುಲಿಯನ್ನು ಕಂಡು ಪ್ರಜ್ಞೆ ತಪ್ಪಿದ್ದಾಳೆ. ಅಲ್ಲದೇ ವಿವಿಧ ಭಾಗದಲ್ಲಿ ಹುಲಿಯ ಸಂಚಾರದ ಬಗ್ಗೆ ಹೆಜ್ಜೆ ಗುರುತುಗಳು ಈ ಭಾಗದ ರೈತರು ಕಂಡಿದ್ದಾರೆ. ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ. ಯಾರು ಸಹ ಧೈರ್ಯದಿಂದ ಓಡಾಟ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾಣ ಭಯದೊಂದಿಗೆ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ‘ ಎಂದು ನೋವು ತೋಡಿಕೊಂಡರು.

ದಕ್ಷಿಣ ಕೊಡಗಿನಲ್ಲಿ ನರಭಕ್ಷಕ ಹುಲಿ ಹಾವಳಿಯಿಂದ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಜಾನುವಾರುಗಳು ದಿನಕ್ಕೊಂದರಂತೆ ಹುಲಿ ದಾಳಿಗೆ ತುತ್ತಾಗುತ್ತಿವೆ. ಕಾರ್ಯಾಚರಣೆ ನಡೆಯುತ್ತಿದ್ದರೂ, ಹುಲಿ ಸೆರೆ ಹಿಡಿಯಲು ಸಾಧ್ಯವಾಗಿಲ್ಲ. ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಕ್ಷಿಣ ಕೊಡಗಿನ ವಿವಿಧ ಭಾಗದಲ್ಲಿ ಆರಕ್ಕಿಂತ ಹೆಚ್ಚು ಹುಲಿಗಳು ಸಂಚರಿಸುತ್ತಿವೆ. ಇವುಗಳನ್ನು ನಿಯಂತ್ರಣಕ್ಕೆ ತರಲು ತಕ್ಷಣ ಅರಣ್ಯ ಸಚಿವರ ಸಮ್ಮುಖದಲ್ಲಿಯೇ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಯಬೇಕು. ಅರಣ್ಯ ಸಚಿವರು ವಾರದೊಳಗೆ ಸಭೆ ಕರೆಯಲು ವಿಫಲರಾದರೆ ಕೊಡಗಿನ ಸಂಘ–ಸಂಸ್ಥೆಗಳ ಸಹಕಾರದೊಂದಿಗೆ ಕೊಡಗು ಬಂದ್ಗೆ ಕರೆ ನೀಡಲಾಗುವುದೆಂದು ಮನುಸೋಮಯ್ಯ ಎಚ್ಚರಿಸಿದರು.

ಟಿ.ಶೆಟ್ಟಿಗೇರಿಯಲ್ಲಿ ಅಮಾಯಕ ಮಹಿಳೆ ಮೇಲೆ ಹುಲಿ ದಾಳಿ ನಡೆಸಿದ್ದನ್ನು ಖಂಡಿಸಿ, ರೈತ ಸಂಘ ಹಾಗೂ ಗ್ರಾಮಸ್ಥರು ಸ್ಥಳದಲ್ಲಿ ಪ್ರತಿಭಟನೆ ನಡೆಸಿತ್ತು. ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಕೂಡಲೇ ರೈತರೊಂದಿಗೆ ತುರ್ತು ಸಭೆ ನಡೆಸಿ, ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ತೀರ್ಮಾನ ಕೈಗೊಂಡಿದ್ದರೂ ಯಾವುದೇ ಪ್ರಗತಿ ಕಂಡಿಲ್ಲ ಎಂದು ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಬಾಚಮಾಡ ಭವಿಕುಮಾರ್, ಪೊನ್ನಂಪೇಟೆ ಹೋಬಳಿ ಅಧ್ಯಕ್ಷ ಆಲೆಮಾಡ ಮಂಜುನಾಥ್, ಹುದಿಕೇರಿ ಹೋಬಳಿ ಅಧ್ಯಕ್ಷ ಚಂಗುಲಂಡ ಸೂರಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.