ಶನಿವಾರ, ನವೆಂಬರ್ 16, 2019
24 °C

ಸೇನಾ ನೇಮಕಾತಿ ರ‍್ಯಾಲಿ: ಜಿಲ್ಲಾಧಿಕಾರಿ ಭೇಟಿ

Published:
Updated:
Prajavani

ಮಡಿಕೇರಿ: ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೇನಾ ನೇಮಕಾತಿ ರ‍್ಯಾಲಿ ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಸೇನಾ ನೇಮಕಾತಿಗೆ ಸಂಬಂಧಿಸಿದಂತೆ ಸೇನಾ ಅಧಿಕಾರಿಗಳು  ಮಾಹಿತಿ ನೀಡಿದರು.

ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಲೆಫ್ಟಿನೆಂಟ್‌ ಕರ್ನಲ್ ಗೀತಾ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿಬಾಯಿ ಇತರರು ಇದ್ದರು.

ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಸುಮಾರು 9,572 ಮಂದಿ ಹೆಸರು ನೋಂದಾಯಿಸಿದ್ದಾರೆ. ಮೊದಲ ದಿನ 2,445 ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿತ್ತು. ಇವರಲ್ಲಿ 1,948 ಮಂದಿ ಹಾಜರಾಗಿದ್ದರು.

2ನೇ ದಿನವಾದ ಸೋಮವಾರ 2,481 ಮಂದಿಯನ್ನು ಆಹ್ವಾನಿಸಲಾಗಿತ್ತು. ಇವರಲ್ಲಿ 1,825 ಮಂದಿ ಅಭ್ಯರ್ಥಿಗಳು ಹಾಜರಾಗಿ ಓಟ, ಉದ್ದ ಜಿಗಿತ, ಎತ್ತರ ಜಿಗಿತ ಮೊದಲಾದ ದೈಹಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಪಾಲ್ಗೊಂಡಿದ್ದರು ಎಂದು ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಗೀತಾ ಮಾಹಿತಿ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)