ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು

Published 11 ಡಿಸೆಂಬರ್ 2023, 13:25 IST
Last Updated 11 ಡಿಸೆಂಬರ್ 2023, 13:25 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕುಟ್ಟ ಪೂಜೆಕಲ್ಲಿನ ನಿವಾಸಿ ಆನಂದ್ ಕುಮಾರ್ ಎಂಬಾತನಿಗೆ ವಿರಾಜಪೇಟೆ ಜೆಎಂಎಫ್ ಸಿ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

2017ರ ಜೂ.30ರಂದು ಆರೋಪಿ ಆನಂದ್ ಕುಮಾರ್ ವಿರುದ್ಧ ಬಾಲಕಿಯ ಸಂಬಂಧಿಕರು ದೂರು ನೀಡಿದ್ದರು. ಕುಟ್ಟ ಪೊಲೀಸರು ಆರೋಪಿ ವಿರುದ್ಧ ಪೊಕ್ಷೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಅಂದಿನ ಕುಟ್ಟ ಸಿಪಿಐ ದಿವಾಕರ್ ಹಾಗೂ ಗೋಣಿಕೊಪ್ಪಲು ಸಿಪಿಐ ಪಿ.ಕೆ.ರಾಜು ಪ್ರಕರಣದ ತನಿಖಾಧಿಕಾರಿಗಳಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ಮಾರ್ಗದರ್ಶನದಲ್ಲಿ ನ್ಯಾಯಾಲಯಕ್ಕೆ ಸಮಗ್ರ ವರದಿ ನೀಡಿದ್ದರು.

ಇದನ್ನು ಪರಿಶೀಲಿಸಿದ ನ್ಯಾಯಾಲಯ ಇದೀಗ ಆರೋಪಿ ಆನಂದ್ ಕುಮಾರ್‌‌‌‌ಗೆ ಪೋಕ್ಷೊ ಕಾಯ್ದೆ ಕಲಂ 6 ಅನ್ವಯ 20 ವರ್ಷ ಕಠಿಣ ಶಿಕ್ಷೆ ಹಾಗೂ ₹50 ಸಾವಿರ ದಂಡ ತಪ್ಪಿದ್ದಲ್ಲಿ 2 ವರ್ಷ ಜೈಲು, ಶಿಕ್ಷೆ ವಿಸ್ತರಣೆ ಮತ್ತು ಕಲಂ 506 ಐಪಿಸಿ ಅಡಿಯಲ್ಲಿ 1 ವರ್ಷ ಜೈಲು ಶಿಕ್ಷೆ ಹಾಗೂ ₹5ಸಾವಿರ ದಂಡ ಕಲಂ 376 (2) (ಎನ್) ಐಪಿಸಿ ಅಡಿಯಲ್ಲಿ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT