ಸೋಮವಾರಪೇಟೆ: ವೈದ್ಯಕೀಯ ತುರ್ತು ಚಿಕಿತ್ಸೆಗೆ ಅರ್ಜಿ ಸಲ್ಲಿಸಲು ಹಾಗೂ ಪಡಿತರ ಚೀಟಿ ತಿದ್ದುಪಡಿಗಾಗಿ 2027ರ ಮಾರ್ಚ್ 31ರವರೆಗೆ ಸರ್ಕಾರದಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ನಿರೀಕ್ಷಕಿ ಯಶಸ್ವಿನಿ ತಿಳಿಸಿದರು.

ತಾಲೂಕು ಗ್ಯಾರಂಟಿ ಯೋಜನೆಯ ಪ್ರಾಧಿಕಾರ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಮಿತಿ ಸಭೆಯಲ್ಲಿ ಅವರು ಆಹಾರ ಇಲಾಖೆಗೆ ಸಂಬಂಧಿಸಿ ಮಾಹಿತಿ ನೀಡಿದರು.

ತಾಲ್ಲೂಕಿನಲ್ಲಿ ಎಪಿಎಲ್ ಆಗಿ ಪರಿವರ್ತನೆಗೊಂಡಿದ್ದವರ ಪೈಕಿ 261 ಅರ್ಜಿದಾರರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರೆಂದು ಅರ್ಜಿ ಸ್ವೀಕೃತಗೊಂಡಿದೆ. ಇದರ ಪೈಕಿ 102 ಪ್ರಕರಣಗಳನ್ನು ಮರುಸ್ಥಾಪಿಸಲಾಗಿದ್ದು, ಉಳಿದ 78 ಪ್ರಕರಣಗಳಿಗೆ ಅಗತ್ಯ ದಾಖಲೆಗಳನ್ನು ಹಾಜರುಪಡಿಸುವಂತೆ ನೋಟಿಸ್ ನೀಡಲಾಗಿದೆ ಎಂದುಸಭೆಗೆ ತಿಳಿಸಿದರು.

ಯುವನಿಧಿ ಯೋಜನೆಯಡಿ 2024ರ ಜನವರಿಯಿಂದ 2026ರ ಫೆಬ್ರುವರಿಯವರೆಗೆ ₹1.64 ಕೋಟಿ ಯುವ ನಿಧಿ ಹಣ ನೀಡಲಾಗಿರುತ್ತದೆ ಎಂದು ಉದ್ಯೋಗಾಧಿಕಾರಿ ಮಂಜುನಾಥ್ ಮಾಹಿತಿ ನೀಡಿದರು.

ಗೃಹಲಕ್ಷ್ಮೀ ಯೋಜನೆಯಡಿ 2026ರ ಮಾರ್ಚ್ನಿಂದ ಪಾವತಿಗೆ ಬಾಕಿ ಇದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುಧೋಳ್ ತಿಳಿಸಿದರು.ಸಭೆಯಲ್ಲಿ ತಾ.ಪಂ. ಶ್ರೀನಿವಾಸ್ , ಸಮಿತಿ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-51-822159410

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.