ಗುರುವಾರ , ಮಾರ್ಚ್ 23, 2023
30 °C

ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ನಾಲ್ವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿರಾಜಪೇಟೆ: ಎರಡು ತಲೆ ಹಾವನ್ನು ಅಕ್ರಮವಾಗಿ ಮಾರಲು ಯತ್ನಿಸುತಿದ್ದ ನಾಲ್ವರನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಗುರುವಾರ ಬಂಧಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹದಡಿ ಗ್ರಾಮದ ಎಸ್.ಎಚ್. ಶಿವಕುಮಾರ್, ಗದಗ ಜಿಲ್ಲೆಯ ಶಿರಹಟ್ಟಿಯ ಮಲ್ಲಿಕ್ ಸಾಬ್ಹೊಂಟಿ, ಹಾವೇರಿ ಜಿಲ್ಲೆಯ ಬಂಕಾಪುರ ಗ್ರಾಮದ ಮಹಮ್ಮದ್ ಖಾಸಿಂ ಮಕಂದರ್ ಹಾಗೂ ಮಜಾರ್ ಸತ್ತರ್ ಶೇಖ್ ಬಂಧಿತ
ಆರೋಪಿಗಳು.

ಎರಡು ತಲೆಯ ಹಾವನ್ನು ದಾವಣಗೆರೆಯಿಂದ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಅರಣ್ಯ ಸಂಚಾರಿ ದಳ ಕಾರ್ಯಚರಣೆ ನಡೆಸಿದೆ.

ಗೋಣಿಕೊಪ್ಪಲು ಸಮೀಪದ ದೇವರಪುರ ಗ್ರಾಮ ವ್ಯಾಪ್ತಿಯಲ್ಲಿ ಜು.1 ರಂದು ಕಾರನ್ನು ತಡೆದು ತಪಾಸಣೆ ನಡೆಸಿ ಎರಡು ತಲೆಯ ಹಾವು ಹಾಗೂ ಕಾರನ್ನು ವಶಕ್ಕೆ ಪಡೆದ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದರು.

ಬಂಧಿತ ಆರೋಪಿಗಳನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಅಧೀಕ್ಷಕ ಸುರೇಶ್ ಬಾಬು ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ತಾಲ್ಲೂಕು ಘಟಕದ ಉಪನಿರೀಕ್ಷಕಿ ವೀಣಾ ನಾಯಕ್, ಸಿಬ್ಬಂದಿಗಳಾದ ಕೆ.ಬಿ. ಸೋಮಣ್ಣ, ಟಿ.ಪಿ.ಮಂಜುನಾಥ್, ಪಿ.ಬಿ.ಮೊಣ್ಣಪ್ಪ, ಎಂ.ಬಿ.ಗಣೇಶ್, ಎಸ್.ಎಂ. ಯೋಗೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು