ಕುಶಾಲನಗರ: ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಗಣರಾಜ್ಯೋತ್ಸವದ ಆಚರಣೆ ಸಂಭ್ರಮದಿಂದ ನಡೆಯಿತು.

ವಿದ್ಯಾರ್ಥಿಗಳು ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ಇದಕ್ಕೂ ಮೊದಲು ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ ಅವರ ಮಾರ್ಗದರ್ಶನದಲ್ಲಿ ಶಾಲಾ ಮಕ್ಕಳು ನಡೆಸಿಕೊಟ್ಟ ದೈಹಿಕ ಕಸರತ್ತು ಹಾಗೂ ರಾಷ್ಟ್ರದ ಸಾರ್ವಭೌಮತ್ವವನ್ನು ಪ್ರತಿಬಿಂಬಿಸುವ ಪಿರಾಮಿಡ್ ರಚಿಸಿ ರಾಷ್ಟ್ರೀಯ ಧ್ವಜವನ್ನು ಎತ್ತಿ ಹಿಡಿದು ಗಮನ ಸೆಳೆದರು.

ಅಧ್ಯಕ್ಷತೆ ವಹಿಸಿದ್ದ ಎಸ್.ಡಿ ಎಂ ಸಿ ಅಧ್ಯಕ್ಷ ಕೆ.ಕೆ.ಹರೀಶ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿದರು.

‘ಶಾಲಾ- ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರ ನಾಯಕರ ಆದರ್ಶ ವ್ಯಕ್ತಿತ್ವ ಹಾಗೂ ರಾಷ್ಟ್ರಪ್ರೇಮ ಬೆಳೆಸಿಕೊಳ್ಳಲು ದೇಶದ ಏಕತೆ, ಸಮಗ್ರತೆಗೆ ಪಣ ತೊಡಬೇಕು’ ಎಂದು ಕುಶಾಲನಗರ ಜೆ.ಸಿ.ಐ. ಕಾವೇರಿ ಸಂಸ್ಥೆಯ ಅಧ್ಯಕ್ಷೆ ತಂಬಂಡ ತೇಜ ದಿನೇಶ್ ಭಾನುವಾರ ಸಲಹೆ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಕೆ.ವಿ.ಅರುಣ್, ಕಾರ್ಯದರ್ಶಿ ಎಂ.ಎಸ್.ಗಣೇಶ್, ಕುಶಾಲನಗರ ಕಾವೇರಿ ಜೆಸಿಐ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಜಗದೀಶ್, ಮಾಜಿ ಅಧ್ಯಕ್ಷ ಎಂ.ಜೆ.ರಜನಿಕಾಂತ್, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಎ.ಎಂ.ಜವರಯ್ಯ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಶಿಕ್ಷಕರಾದ ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯಾ, ಸಿಬ್ಬಂದಿ ಎಂ.ಉಷಾ, ಶಾಲಾ ನಾಯಕ ಎಂ.ಗೌತಮ್, ಉಪ ನಾಯಕಿ ಸ್ಪಂದನ, ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.