ಹುಣ್ಣಿಮೆಯ ಅಂಗವಾಗಿ ಕಾವೇರಿಗೆ 182ನೇ ಮಹಾ ಆರತಿ | ಆರಾಧನೆ ಮೂಲಕ ನದಿ ಪರಿಸರದ ಸಂರಕ್ಷಣೆ

ಕುಶಾಲನಗರ: ಜೀವನದಿ ಕಾವೇರಿ ನದಿಯ ಸಂರಕ್ಷಣೆ ನಾಡಿನ ಪ್ರತಿಯೊಬ್ಬರ ಹೊಣೆಯಾಗುವ ಮೂಲಕ ಗಂಗಾಜಲವನ್ನು ಪೂಜನೀಯವಾಗಿಸಬೇಕು ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಹೇಳಿದರು.

ಇಲ್ಲಿನ ಕಾವೇರಿ ಮಹಾ ಆರತಿ ಬಳಗ ಆಶ್ರಯದಲ್ಲಿ ಸ್ಥಳೀಯ ವೀರಶೈವ ಸಮಾಜದ ಸಹಯೋಗದೊಂದಿಗೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಳಿಯ ಕಾವೇರಿ ಆರತಿ ಕ್ಷೇತ್ರದಲ್ಲಿ ಹುಣ್ಣಿಮೆಯ ಅಂಗವಾಗಿ ನಡೆದ 182ನೇ ಮಹಾಆರತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಿರಂತರ ಆರಾಧನೆ ಮೂಲಕ ನದಿ ಪರಿಸರದ ಸಂರಕ್ಷಣೆ ಆಗಲಿ ಎಂದು ಆಶಯ ವ್ಯಕ್ತಪಡಿಸಿದರು.

ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಅಧ್ಯಕ್ಷ ಎಚ್.ವಿ.ಶಿವಪ್ಪ ಮಾತನಾಡಿ, ‘ನದಿಗೆ ಯಾರೂ ಕೂಡ ತ್ಯಾಜ್ಯ ಬಿಸಾಡದಂತೆ ಸ್ವಚ್ಛಂದವಾಗಿ ಹರಿಯಲು ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ’ ಎಂದು ಹೇಳಿದರು.

ನದಿ ಸ್ವಚ್ಚತಾ ಆಂದೋಲನದ ಸಂಚಾಲಕ ಎಂ.ಎನ್.ಚಂದ್ರಮೋಹನ್ ಮಾತನಾಡಿದರು. ಅರ್ಚಕ ಕೃಷ್ಣಮೂರ್ತಿ ಭಟ್ ಅವರು ಅಷ್ಟೋತ್ತರ ಕುಂಕುಮಾರ್ಚನೆ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು.

ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಶಾಂಬಶಿವಯ್ಯ, ಉಪಾಧ್ಯಕ್ಷ ಎಚ್.ಪಿ.ಉದಯಕುಮಾರ್,
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ಕಾರ್ಯದರ್ಶಿ ಬಿ.ನಟರಾಜು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ, ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಮೇಲ್ವಿಚಾರಕರಾದ ನಾಗರಾಜ್, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಧರಣಿ ಸೋಮಯ್ಯ, ಕುಶಾಲನಗರ ತಾಲ್ಲೂಕು ಮಹಾಸಭಾ ಅಧ್ಯಕ್ಷ ಎಚ್.ಎಂ.ಮಧುಸೂದನ್, ಕಾರ್ಯದರ್ಶಿ ಶುಭಶೇಖರ್, ಕುಶಾಲನಗರ ಅಕ್ಕನ ಬಳಗದ ಅಧ್ಯಕ್ಷೆ ಕಮಲಾ ಉದಯಕುಮಾರ್ ಪಾಲ್ಗೊಂಡಿದ್ದರು.

ದೇವರ ಸೃಷ್ಟಿಯಾಗಿರುವ ಕಾವೇರಿ ಜೀವಜಲಕ್ಕೆ ಮಾನವನ ಹಸ್ತಕ್ಷೇಪ ಇಲ್ಲದೇ ಹೋದಲ್ಲಿ ನದಿಯ ಅಸ್ತಿತ್ವವು ಉಳಿಯುತ್ತದೆ ಹಾಗೂ ಸ್ವಚ್ಛಂದವಾಗಿ ಹರಿಯಲು ಸಾಧ್ಯ
ಸದಾಶಿವ ಸ್ವಾಮೀಜಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.