ಮಡಿಕೇರಿ: ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ ಎಂದು ಬಿಜೆಪಿ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ ಸವಾಲೆಸೆದರು.

ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರದ ಸ್ಥಿತಿಯ ಬಗ್ಗೆ ಇದಕ್ಕಿಂತಲೂ ಬೇರೆ ಉದಾಹರಣೆ ಬೇಕಿಲ್ಲ. ಕಾಂಗ್ರೆಸ್ ಶಾಸಕರೇ ಹೇಳುವಂತೆ ಅಧಿಕಾರಿಗಳಿಗೆ ಲಂಚ ನೀಡಬೇಕು. ಆ ಲಂಚದ ಹಣ ಯಾರಿಗೆ ಹೋಗುತ್ತದೆ ಎನ್ನುವುದರ ಕುರಿತು ತನಿಖೆ ನಡೆಸಬೇಕು ಎಂದು ಅವರು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಈಗ ಒಂದು ಸಮುದಾಯವನ್ನು ಮಾತ್ರ ಮೆಚ್ಚಿಸುವ ಸಲುವಾಗಿ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಬೆಂಗಳೂರಿನ ಕಾಲ್ತುಳಿತ ಪ್ರಕರಣ ಹೀಗೆ ಸಾಲು ಸಾಲು ವೈಫಲ್ಯಗಳು ಇದ್ದಾಗ್ಯೂ ಸರ್ಕಾರ ರಾಜೀನಾಮೆ ನೀಡದೇ ಭಂಡತನದಲ್ಲಿ ಮುಂದುವರಿದಿದೆ ಎಂದು ಆರೋಪಿಸಿದರು.

ಉಚಿತ ಭಾಗ್ಯ ನೀಡವುದು ಸಹ ಒಂದು ಕಡೆಯಿಂದ ಕಿತ್ತು ಮತ್ತೊಂದು ಕಡೆಗೆ ಕೊಡುವುದಷ್ಟೇ ಆಗಿದೆ. ಮನೆಯ ಒಬ್ಬರಿಂದ ಕಿತ್ತು ಅದನ್ನು ಮತ್ತೊಬ್ಬ ಸದಸ್ಯರಿಗೆ ನೀಡಲಾಗುತ್ತಿದೆ ಎಂಬುದು ಜನರಿಗೆ ಈಗ ಅರಿವಾಗಿದೆ. ಹಾಗಾಗಿ, ಚುನಾವಣೆ ಈಗ ನಡೆದರೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಕೊಡವ ಸಮಾಜಕ್ಕೆ ಜಾಗ ಕೊಡಿಸಲು ಮೊದಲು ಪ್ರಯತ್ನ ಮಾಡಿದ್ದು ಬಿಜೆಪಿ. ಈಗ ಏಕಪಕ್ಷೀಯವಾಗಿ ಒಂದು ಪಕ್ಷದ ಕಡೆಗೆ ನಿಂತು ಸನ್ಮಾನ ಮಾಡಿರುವುದು ಸರಿಯಲ್ಲ. ಕನಿಷ್ಠ ಪಕ್ಷ ಈ ಜಾಗ ಪಡೆಯಲು ಮೂಲ ಕಾರಣಕರ್ತರನ್ನು ನೆನಪು ಮಾಡಿಕೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ಪಕ್ಷದ ಮುಖಂಡ ಸುನಿಲ್ ಸುಬ್ರಮಣಿ ಮಾತನಾಡಿ, ‘ಈ ಸರ್ಕಾರದಿಂದ ಜನರು ತಲೆತಗ್ಗಿಸುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹರಿಹಾಯ್ದರು.

ಸರ್ಕಾರ ಅಕ್ಷರಶಃ ಧರ್ಮಾಧಾರಿತ ರಾಜಕಾರಣ ಮಾಡುತ್ತಿದೆ. ಧರ್ಮ, ಧರ್ಮಗಳ ನಡುವೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಪಕ್ಷದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ, ‘ಅಹಿಂದ ಎಂದು ಹೇಳಿಕೊಂಡು ಬಂದ ಸಿದ್ದರಾಮಯ್ಯ ಈಗ ಅಲ್ಪಸಂಖ್ಯಾತರಿಗಷ್ಟೇ ಆದ್ಯತೆ ನೀಡಿ, ಇನ್ನುಳಿದ ಹಿಂದುಳಿದ ವರ್ಗಗಳು ಹಾಗೂ ದಲಿತರನ್ನು ಕಡೆಗಣಿಸಿದೆ’ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಯಾವುದೇ ಕಾರ್ಯಕ್ರಮಗಳು, ಯೋಜನೆಗಳು ರಾಜ್ಯ ಸರ್ಕಾರದಂತೆ ಧರ್ಮಾಧಾರಿತವಾಗಿಲ್ಲ ಎಂದು ಪ್ರತಿಪಾದಿಸಿದರು.

ಕೇಂದ್ರ ಸರ್ಕಾರದ ಎನ್ಡಿಆರ್ಎಫ್ನಿಂದ 2023-24ನೇ ಸಾಲಿನಲ್ಲಿ ₹ 13.37 ಕೋಟಿ ಹಾಗೂ 2024-25ನೇ ಸಾಲಿನಲ್ಲಿ ₹ 26.31 ಕೋಟಿ ಹಣ ಕೊಡಗು ಜಿಲ್ಲೆಗೆ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು. ಪಕ್ಷದ ಮುಖಂಡರಾದ ಅರುಣ್ ಕುಮಾರ್ ಹಾಗೂ ಸಜಿಲ್ ಕೃಷ್ಣ ಭಾಗವಹಿಸಿದ್ದರು.

‘ಜಿಲ್ಲೆಯನ್ನು ಕಡೆಗಣಿಸಿದ ಉಸ್ತುವಾರಿ ಸಚಿವರು’

ಬಿಜೆಪಿ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ ‘ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯನ್ನು ಕಡೆಗಣಿಸಿದ್ದಾರೆ’ ಎಂದು ಆರೋಪಿಸಿದರು. ಮುಂಗಾರು ಮಳೆಯಿಂದ ಜಿಲ್ಲೆಯ ಅಲ್ಲಲ್ಲಿ ಹಾನಿ ಸಂಭವಿಸಿದೆ. ಹೀಗಿದ್ದರೂ ಜಿಲ್ಲೆಗೆ ಬಂದು ಒಂದು ಸಭೆಯನ್ನೂ ಮಾಡಲಿಲ್ಲ. ಅಧಿಕಾರಿಗಳಿಗೆ ನಿರ್ದೇಶನವನ್ನೂ ನೀಡಲಿಲ್ಲ. ಇನ್ನಾದರೂ ಅವರು ಜಿಲ್ಲೆಯ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.