ಮಡಿಕೇರಿ: ‘ಕೊಡಗು– ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿ ಸಲು ನಾನು ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿ’ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ತಿಳಿಸಿದರು.
‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೂರು ವರ್ಷ ಕೊಡಗಿನಲ್ಲಿ ಕಾರ್ಯನಿರ್ವಹಿಸಿದ್ದೇನೆ. ರಾಜಕೀಯವಾಗಿ ಇನ್ನಷ್ಟು ಸೇವೆ ಮಾಡಲು ಬಯಸಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೂ ತಂದಿದ್ದೇನೆ’ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
‘ಪಕ್ಷವು ಬೇರೆ ಆಕಾಂಕ್ಷಿಗೆ ಟಿಕೆಟ್ ಕೊಟ್ಟರೂ ಅವರ ಪರವಾಗಿ ಕೆಲಸ ಮಾಡುವೆ. ವರಿಷ್ಠರ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ’ ಎಂದೂ ಹೇಳಿದರು.