ಬ್ಯಾಂಕಾಕ್: ಭಾರತದ ಪುರುಷರ ಮತ್ತು ಮಹಿಳೆಯರ ಹಾಕಿ ತಂಡದವರು ಯೂತ್ ಒಲಿಂಪಿಕ್ಸ್ ಅರ್ಹತಾ ಟೂರ್ನಿಯ ಪಂದ್ಯಗಳಲ್ಲಿ ಗೆದ್ದಿದ್ದಾರೆ.
ಗುರುವಾರ ನಡೆದ ಮಹಿಳಾ ವಿಭಾಗದ ‘ಬಿ’ ಗುಂಪಿನ ಪಂದ್ಯದಲ್ಲಿ ಭಾರತ 10–0 ಗೋಲುಗಳಿಂದ ದಕ್ಷಿಣ ಕೊರಿಯಾ ತಂಡವನ್ನು ಸೋಲಿಸಿತು. ಪುರುಷರ ತಂಡದವರು 6–2 ಗೋಲುಗಳಿಂದ ಜಪಾನ್ ಸವಾಲು ಮೀರಿದರು.