ಗೋಣಿಕೊಪ್ಪಲು: ಪೊನ್ನಂಪೇಟೆಯಿಂದ ಕುಟ್ಟ ಹೆದ್ದಾರಿಯ ಬೆಕ್ಕೆಸೂಡ್ಲೂರು, ಕಾನೂರು, ನಿಟ್ಟೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಬೆಕ್ಕೆಸೂಡ್ಲೂರಿನಿಂದ ಕಾನೂರು ಮೂಲಕ ಮಲ್ಲಂಗೇರೆ (ನಿಟ್ಟೂರು ಬ್ರಹ್ಮಗಿರಿ)ವರೆಗೆ 7 ಕಿ.ಮೀ.ವರೆಗೆ ಡಾಂಬರೀಕರಣ ಹೊಂದಿದ್ದು, ಕಾನೂರು ಪಟ್ಟಣದ ರಸ್ತೆ ಸೇರಿ 1,100 ಮೀಟರ್ವರೆಗೆ ರಸ್ತೆ ಅಗಲೀಕರಣ ಹಾಗೂ 200 ಮೀಟರ್ ಕಾಂಕ್ರಿಟ್ ಚರಂಡಿ ನಡೆಸಲಾಗುವುದು ಎಂದರು.

ಈ ರಸ್ತೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ₹5.30 ಕೋಟಿ ಅನುದಾನ ಬಿಡುಗಡೆಯಾಗಿದೆ. ಮಳೆಯಿಂದ ಹಾನಿಗೊಳಗಾಗಿದ್ದ ಈ ರಸ್ತೆಯ ಮರು ನಿರ್ಮಾಣಗೊಳ್ಳುತ್ತಿದೆ. ಗುಣಮಟ್ಟ ಕಾಯ್ದುಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ರಮೇಶ್, ಪಂಚಾಯಿತಿ ಸದಸ್ಯರು ಬೋಪಣ್ಣ, ಜೀವನ್, ಮುಖಂಡರಾದ ಬಾನಂಡ ಪೃಥ್ಯು, ಪೆಮ್ಮಂಡ ಪೊನ್ನಪ್ಪ, ಮುಕ್ಕಾಟೀರ ಸಂದೀಪ್, ವಿನು ಉತ್ತಪ್ಪ, ಮನು, ಕೇಚಮಾಡ ಸಿದ್ದು ನಾಚಪ್ಪ, ನಿಖಿಲ್ ಸೋಮಣ್ಣ, ಅಜ್ಜಿಕುಟ್ಟಿರ ಪೊನ್ನು, ಪಮ್ಮು, ಅಣ್ಣಳಮಾಡ ಹರೀಶ್, ಅಂಟೋನಿ, ಚೆಕ್ಕೇರ ಸುಧೀರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.