ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ರೋಡ್‌ಶೊ, ಕಾಂಗ್ರೆಸ್‌ನಿಂದ ಜಾಥಾ ಇಂದು

ಎರಡೂ ಪಕ್ಷಗಳಿಂದ ಮಡಿಕೇರಿಯಲ್ಲಿ ಕಾರ್ಯಕ್ರಮ
Published 18 ಏಪ್ರಿಲ್ 2024, 19:19 IST
Last Updated 18 ಏಪ್ರಿಲ್ 2024, 19:19 IST
ಅಕ್ಷರ ಗಾತ್ರ

ಮಡಿಕೇರಿ: ಮೈಸೂರು– ಕೊಡಗು ಲೋಕಸಭಾ ಚುನಾವಣೆ ಪ್ರಯುಕ್ತ ಏಪ್ರಿಲ್ 19ರಂದು ಮಡಿಕೇರಿಯಲ್ಲಿ ಬೆಳಿಗ್ಗೆ ಬಿಜೆಪಿ ರೋಡ್‌ ಶೋ ಮತ್ತು ಮಧ್ಯಾಹ್ನ ಕಾಂಗ್ರೆಸ್ ಬೈಕ್ ಜಾಥಾ ಏರ್ಪಡಿಸಿವೆ.

ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬೆಳಿಗ್ಗೆ 10.30ಕ್ಕೆ ನಗರದ ಬನ್ನಿಮಂಟಪದಿಂದ ಟೋಲ್‌ಗೇಟ್‌ವರೆಗೆ ರೋಡ್‌ ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಕೊಡಗು ಜಿಲ್ಲಾ ವಕ್ತಾರ ಬಿ.ಕೆ.ಅರುಣ್‌ಕುಮಾರ್ ತಿಳಿಸಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಎ.ವಿ. ಶಾಲೆಯಿಂದ ಇಂದಿರಾಗಾಂಧಿ ವೃತ್ತ (ಚೌಕಿ)ಯ ಮಾರ್ಗವಾಗಿ ಸುದರ್ಶನ ವೃತ್ತ, ನಂತರ ಹಳೆ ಖಾಸಗಿ ಬಸ್‌ನಿಲ್ದಾಣದವರೆಗೂ ಬೃಹತ್ ಬೈಕ್ ಜಾಥಾ ನಡೆಯಲಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಶ್ ಎಲ್ಲಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT