ಕುಶಾಲನಗರ: ‘ದೇಶ ರಕ್ಷಣೆಗೆ ಸೈನಿಕರು, ಪೊಲೀಸರು ಬೇಕು. ಅದೇ ರೀತಿ ದೇಶದ ಪ್ರಗತಿಗೆ ಶಿಕ್ಷಕರ ಪಾತ್ರ ತುಂಬ ಅಗತ್ಯ’ ಎಂದು ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತ ಶಯನ ಹೇಳಿದರು.

ಸಮೀಪದ ಗುಮ್ಮನಕೊಲ್ಲಿ ಮೂಕಾಂಬಿಕಾ ಅನುದಾನಿತ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಎಸ್.ಎಸ್.ಗೋಪಾಲ ಅವರಿಗೆ ಸೋಮವಾರ ಆಯೋಜಿಸಿದ್ದ ಗೌರವ ಅಭಿನಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಿಕ್ಷಕ ವೃತ್ತಿ ಪವಿತ್ರವಾದ ವೃತ್ತಿಯಾಗಿದ್ದು, ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕು. ಮಕ್ಕಳ ಭವಿಷ್ಯಕ್ಕೆ ಅಡಿಪಾಯವೇ ಶಿಕ್ಷಕರಾಗಿದ್ದಾರೆ ಎಂದರು.

ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಗೋಪಾಲ್ ಅವರು ವೃತ್ತಿ ಬಗ್ಗೆ ಇಟ್ಟ ಗೌರವ ಪ್ರೀತಿ ಧನ್ಯತೆ ಭಾವನೆ ಮೂಡಿಸಿದೆ ಎಂದರು. ಮಕ್ಕಳು ತಂದೆ ತಾಯಿಗಳನ್ನು ಹಗುರವಾಗಿ ಕಾಣಬಾರದು,ಗೌರವ ಪ್ರೀತಿಯಿಂದ ಕಾಣಬೇಕು ಎಂದರು.

ವಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಅಧ್ಯಕ್ಷತೆ ವಹಿಸಿದ್ದರು. ಕೂಡಿಗೆ ಡಯಟ್ ಉಪನ್ಯಾಸಕಿ ಬಿ.ಎನ್.ಪುಷ್ಪಾ,ಮೂಕಾಂಬಿಕಾ ಶಸಲೆ ಮುಖ್ಯ ಶಿಕ್ಷಕ ಎಸ್.ಎಸ್.ಗೋಪಾಲ್, ಶಿಕ್ಷಕಿ ದೇವಕಿಗೋಪಾಲ್, ಮೂಕಾಂಬಿಕಾ ಪಿಯು ಕಾಲೇಜು ಪ್ರಾಂಶುಪಾಲ ಪ್ರಸನ್ನ ನಿವೃತ್ತ ಸಿಬ್ಬಂದಿ ಪಾರ್ವತಿ, ಪ್ರಭಾರ ಮುಖ್ಯ ಶಿಕ್ಷಕ ಸುರೇಶ್, ಶಿಕ್ಷಕರಾದ ಪ್ರತಾಪ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.