ಮಡಿಕೇರಿ: ವಿವಿಧ ವಸತಿ ಯೋಜನೆಗಳಡಿ ಮನೆಗಳ ನಿರ್ಮಾಣಕ್ಕಾಗಿ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಸ್ಥಳೀಯರು ಅನೇಕ ಸಮಸ್ಯೆಗಳನ್ನು ಶಾಸಕ ಡಾ.ಮಂತರ್ಗೌಡ ಅವರ ಮುಂದಿಟ್ಟರು. ಎಲ್ಲ ಸಮಸ್ಯೆಗಳಿಗೂ ಪರಿಹಾರ ಒದಗಿಸುವ ಭರವಸೆಯನ್ನು ಮಂತರ್ಗೌಡ ನೀಡಿದರು. ಅಧಿಕಾರಿಗಳಿಗೆ ಕೆಲವೊಂದು ಸೂಚನೆಗಳನ್ನೂ ನೀಡಿದರು.

ಈ ದೃಶ್ಯ ತಾಲ್ಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 178 ಮಂದಿಗೆ ಮನೆ ನಿರ್ಮಾಣಕ್ಕಾಗಿ ಕಾರ್ಯಾದೇಶ ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಕಂಡು ಬಂತು.

ಕೇವಲ ಕಾರ್ಯಾದೇಶ ಪತ್ರ ವಿತರಣೆ, ಭಾಷಣಕ್ಕಷ್ಟೇ ಈ ಸಭೆಯನ್ನು ಮೀಸಲಿಡದೇ ಸ್ಥಳೀಯರು ಸಮಸ್ಯೆಗಳನ್ನು ಪ್ರಸ್ತಾಪಿಸುವುದಕ್ಕೂ ಅವಕಾಶ ಮಾಡಿಕೊಟ್ಟಿದ್ದು ವಿಶೇಷ ಎನಿಸಿತು.

ಮುಖ್ಯವಾಗಿ, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಕುರಿತ ಸಮಸ್ಯೆಗಳನ್ನು ಗ್ರಾಮಸ್ಥರು ಶಾಸಕರ ಮುಂದಿಟ್ಟರು. ಈ ಕುರಿತು ಸುದೀರ್ಘ ಚರ್ಚೆ ನಡೆಯಿತು. ಗಾಳಿಬೀಡು ಸೇರಿದಂತೆ ಇಲ್ಲಿನ ವಿವಿಧ ಪ್ರದೇಶಗಳಲ್ಲಿ ವನ್ಯಪ್ರಾಣಿಗಳ ಹಾವಳಿ ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದರು.

ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯವರು ಎಲ್ಲಾ ಜಾಗವನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರುತ್ತದೆ ಎಂದು ಇಲ್ಲಿನ ಸ್ಥಳೀಯರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಮಾಹಿತಿ ಇದೆ. ಈ ರೀತಿ ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಕಿರಿಕಿರಿ ಕೊಡಬಾರದು. ಸ್ಥಳೀಯರು ಬದುಕಬೇಕು, ಅರಣ್ಯವೂ ಸಹ ಉಳಿಯಬೇಕು ಎಂದು ಡಾ.ಮಂತರ್ ಗೌಡ ತಿಳಿಸಿದರು.

ಅರಣ್ಯ ಇಲಾಖೆಯವರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜೊತೆಗೆ, ಕಂದಾಯ ಇಲಾಖೆಯವರ ಸಹಕಾರ ಹೆಚ್ಚಿನದಾಗಿ ಇರಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಸಮನ್ವಯತೆಯಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ನಿರ್ದೇಶನ ನೀಡಿದರು.

ಮಾಂದಲ್ಪಟ್ಟಿ ರಸ್ತೆಯನ್ನು ಸರಿಪಡಿಸುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗೆ ಹಾಗೂ ಕಾಲೂರು ಬಳಿ ನಿರ್ಮಾಣವಾಗುತ್ತಿರುವ ಸೇತುವೆಯನ್ನು ಕೂಡಲೇ ಪೂರ್ಣಗೊಳಿಸುವಂತೆ ಪಂಚಾಯತ್ ರಾಜ್ ಎಂಜಿನಿಯರ್ಗೆ ಸೂಚಿಸಿದರು.

ಗಾಳಿಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ, ಉಪಾಧ್ಯಕ್ಷ ರಾಜಾಶೇಖರ, ಗ್ಯಾರಂಟಿ ಯೋಜನೆ ತಾಲ್ಲೂಕು ಸಮಿತಿ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಷಾ, ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಘು ಭಾಗವಹಿಸಿದ್ದರು.

178 ಮನೆ ನಿರ್ಮಾಣ; ಕಾರ್ಯಾದೇಶಪತ್ರ ವಿತರಣೆ

ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 8 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 178 ಮನೆಗಳ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಶುಕ್ರವಾರ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಿದರು. ತಾಲ್ಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮನೆ ನಿರ್ಮಾಣ ಕಾರ್ಯಾದೇಶ ಪತ್ರ ವಿತರಿಸಿ ಮಾತನಾಡಿದ ಅವರು ‘ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಿಸಲಾಗುತ್ತಿದ್ದು ಮಳೆಗಾಲ ನಂತರ ಮನೆ ನಿರ್ಮಾಣಕ್ಕೆ ಮುಂದಾಗಬಹುದು’ ಎಂದು ಸಲಹೆ ನೀಡಿದರು. ಸರ್ಕಾರದ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ನಿವೇಶನ ಇರುವವರಿಗೆ ಮನೆ ನಿರ್ಮಿಸಿಕೊಡಲು ಮುಂದಾಗಿದ್ದು ಈ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಸರ್ಕಾರದ ವಿವಿಧ ಯೋಜನೆಗಳ ಜೊತೆಗೆ ಗ್ಯಾರಂಟಿ ಕಾರ್ಯಕ್ರಮಗಳಾದ ಶಕ್ತಿ ಗೃಹಜ್ಯೋತಿ ಗೃಹಲಕ್ಷ್ಮಿ ಅನ್ನಭಾಗ್ಯ ಮತ್ತು ಯುವನಿಧಿ ಜಾರಿಗೊಳಿಸಿದ್ದು ಇವುಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗುವತ್ತ ಮುಂದಾಗಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.