ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿ ಹೋರಾಟಗಾರ ರಾಯ್ ಡೇವಿಡ್ (71) ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.

ಶಿವಮೊಗ್ಗದಲ್ಲಿ ಗುರುವಾರ ಮತ್ತು ಶುಕ್ರವಾರ ಸಭೆಯೊಂದರಲ್ಲಿ ಭಾಗವಹಿಸಿ ಬೆಂಗಳೂರಿಗೆ ಬಂದಿದ್ದರು. ಉಸಿರಾಟದ ಸಮಸ್ಯೆಗೆ ಒಳಗಾದ ಅವರನ್ನು ಶನಿವಾರ ಬೆಳಿಗ್ಗೆ ಬೆಂಗಳೂರಿನ ಸಂತ ಫಿಲೊಮಿನಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾದರು. ಅಂತ್ಯಕ್ರಿಯೆ ಮೇ 18ರಂದು ಕುಶಾಲನಗರದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಅವರಿಗೆ ಪತ್ನಿ ಶಮಂತಕ ಡೇವಿಡ್, ಪುತ್ರರಾದ ರೋಷನ್ ಡೇವಿಡ್, ರೋಹನ್ ಡೇವಿಡ್ ಹಾಗೂ ಪುತ್ರಿ ರಚನಾ ಇದ್ದಾರೆ.

ಆದಿವಾಸಿಗಳ ಪರವಾದ ಸಾಕಷ್ಟು ಹೋರಾಟದಲ್ಲಿ ತೊಡಗಿಕೊಂಡಿದ್ದ ಅವರು ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆ (ಕಾರ್ಡ್) ಸೇರಿದಂತೆ ಅನೇಕ ಸಂಘ, ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಆದಿವಾಸಿಗಳಿಗೆ ಅವರ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲು ಅನೇಕ ಕಾರ್ಯಾಗಾರಗಳನ್ನು ಆಯೋಜಿಸುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.