ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2.92 ಲಕ್ಷ ವಶ

Published 21 ಮಾರ್ಚ್ 2024, 15:24 IST
Last Updated 21 ಮಾರ್ಚ್ 2024, 15:24 IST
ಅಕ್ಷರ ಗಾತ್ರ

ಕುಶಾಲನಗರ: ಕೊಡಗು -ಮೈಸೂರು ಜಿಲ್ಲೆಗಳ ಗಡಿಭಾಗ ಇಲ್ಲಿನ ಟೋಲ್ ಗೇಟ್ ಬಳಿ ಚುನಾವಣಾ ವಾಹನ ತಪಾಸಣಾ ಕೇಂದ್ರದಲ್ಲಿ ಗುರುವಾರ ಸಮರ್ಪಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 2,92,657 ಅನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಗಡಿ ಭಾಗದಲ್ಲಿ ವಾಹನ ತಪಾಸಣೆ ಮಾಡುತ್ತಿದಗದ ವೇಳೆ ಬೈಕ್ ನಲ್ಲಿ ಹಣ ಸಾಗಿಸುತ್ತಿದ್ದ ಸಂದರ್ಭ ಪತ್ತೆಯಾಗಿದೆ. ದಾಖಲೆ ಇಲ್ಲದೆ ಹಣ ಸಾಗಾಟ ಮಾಡುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿರುವ‌ ಹಿನ್ನೆಲೆಯಲ್ಲಿ ಕೆಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚುನಾವಣಾ ಅಧಿಕಾರಿ ಪೂವಯ್ಯ ನೇತೃತ್ವದ ತಂಡ ಹಣವನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ತಪಾಸಣಾ ಕೇಂದ್ರದ ತಂಡದ ಸದಸ್ಯರಾದ ಮಹಾದೇವ್, ಅಭಿಷೇಕ್, ಎಎಸ್ಐ ಸುಬ್ರಹ್ಮಣ್ಯ, ಸಿಬ್ಬಂದಿ ಸಮಂತ್, ಜಯಪ್ರಕಾಶ್ ಹಾಗೂ ಸತೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT