ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರಪೇಟೆ: ಸಾಹಿತಿ ರಾಜಶೇಖರ್ ನಿಧನ

Published 12 ಜನವರಿ 2024, 7:34 IST
Last Updated 12 ಜನವರಿ 2024, 7:34 IST
ಅಕ್ಷರ ಗಾತ್ರ

ಸೋಮವಾರಪೇಟೆ: ಜಿಲ್ಲೆಯ ಹಿರಿಯ ಸಾಹಿತಿ, ನಿವೃತ್ತ ಕನ್ನಡ ಉಪನ್ಯಾಸಕ ಎಸ್.ಸಿ. ರಾಜಶೇಖರ್ (87) ಬುಧವಾರ ಮೈಸೂರಿನ ತಮ್ಮ ಪುತ್ರನ ಮನೆಯಲ್ಲಿ ನಿಧನರಾದರು.

ಇವರು ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಅಧ್ಯಕ್ಷರಾಗಿದ್ದರು. ಕುಶಾಲನಗರದಲ್ಲಿ 2016ರಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೆಳನದ ಅಧ್ಯಕ್ಷರಾಗಿದ್ದರು. ಇವರು ಹತ್ತು ಹಲವು ಪುಸ್ತಕಗಳನ್ನು ರಚಿಸಿದ್ದು ಸಾಹಿತ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ.

ಇಲ್ಲಿನ ಪದವಿಪೂರ್ವ ಕಾಲೇಜಿನಲ್ಲಿ ಹಲವು ವರ್ಷ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ  ಇವರು ಸೋಮವಾರಪೇಟೆಯ ಬಸವೇಶ್ವರ ರಸ್ತೆಯ ನಿವಾಸಿಯಾಗಿದ್ದರು. ವಯೋ ಸಹಜವಾದ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಮೈಸೂರಿನ ಜೆ.ಪಿ. ನಗರದ ಮಗನ ಮನೆಯಲ್ಲಿ ನೆಲೆಸಿದ್ದರು.

ಅವರಿಗೆ ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಮೈಸೂರಿನಲ್ಲಿ ಗುರುವಾರ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT