ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ, ಎಂಡಿಎಂಎ ಮಾರಾಟ; ಮೂವರ ಬಂಧನ

Published 4 ಏಪ್ರಿಲ್ 2024, 5:53 IST
Last Updated 4 ಏಪ್ರಿಲ್ 2024, 5:53 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ತಿತಿಮತಿಯ ಮೈಸೂರು– ವಿರಾಜಪೇಟೆ ಹೆದ್ದಾರಿಯಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕೇರಳ ರಾಜ್ಯದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳದ ತಾಮರಶೇರಿ ಪಟ್ಟಣದ ನಿವಾಸಿಗಳಾದ ಮಹಮ್ಮದ್ ಅಶ್ರಫ್ (49), ತಸ್ವೀಕ್ (24), ಎ.ಟಿ.ಅಲ್ಯಾಜ್ (27)  ಬಂಧಿತ ಆರೋಪಿಗಳು. ಇವರಿಂದ 1.4 ಕೆ.ಜಿ ಗಾಂಜಾ ಮತ್ತು 2 ಗ್ರಾಂ ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್‌ ಕುಮಾರ್, ಸಿಪಿಐ ಶಿವರಾಜ್ ಮುಧೋಳ್, ಸಬ್‌ಇನ್‌ಸ್ಪೆಕ್ಟರ್ ರೂಪಾದೇವಿ ಬಿರಾದಾರ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT