ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿತ್ರಿ ಸಾಧನೆ ಬದುಕು ತಿಳಿಸಿ: ಮಚ್ಚಾಡೋ

ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ದಿನಾಚರಣೆ
Last Updated 3 ಜನವರಿ 2020, 13:04 IST
ಅಕ್ಷರ ಗಾತ್ರ

ಮಡಿಕೇರಿ: ‘ಮಕ್ಕಳಿಗೆ ಸಾವಿತ್ರಿಬಾಯಿ ಫುಲೆ ಅವರ ಸಾಧನೆಯ ಬದುಕನ್ನು ತಿಳಿಸುವುದೇ ಆ ಮಹಾನ್‌ ಚೇತನಕ್ಕೆ ನಾವೆಲ್ಲರೂ ಸಲ್ಲಿಸುವ ಗೌರವ’ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೋ ತಿಳಿಸಿದರು.

ನಗರದ ಸೇಂಟ್ ಮೈಕಲ್ ಶಾಲೆಯಲ್ಲಿ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಆಶ್ರಯದಲ್ಲಿ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಸಾವಿತ್ರಿಬಾಯಿ ಫುಲೆ ದೇಶದ ಮೊದಲ ಮಹಿಳಾ ಶಿಕ್ಷಕಿಯಾಗುವುದರೊಂದಿಗೆ ಶಿಕ್ಷಕ ವೃತ್ತಿಗೆ ಹೆಚ್ಚಿನ ಘನತೆಯನ್ನು ತಂದುಕೊಟ್ಟರು. ಸ್ವಾತಂತ್ರ್ಯ ಪೂರ್ವದಲ್ಲೇ ಮಹಿಳಾ ಶಿಕ್ಷಣಕ್ಕಾಗಿ ಹೋರಾಡಿದ ಸಾಧನೆ ಇಂದಿನ ಯುವ ಶಿಕ್ಷಕ ವರ್ಗಕ್ಕೆ ಸ್ಫೂರ್ತಿದಾಯಕ ಎಂದು ಹೇಳಿದರು.

ಹಿಂದುಳಿದ ಸಮುದಾಯದಲ್ಲಿ ಜನಿಸಿದ ಸಾವಿತ್ರಿಬಾಯಿ ಫುಲೆ ಅವರು, ದೇಶದ ಇತಿಹಾಸದಲ್ಲಿ ಅತ್ಯಂತ ಮಹನೀಯರು. ಸ್ತ್ರೀಸ್ವಾತಂತ್ರ್ಯ, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೋರಾಟ ನಡೆಸಿದರು. 9ನೇ ವಯಸ್ಸಿನಲ್ಲಿ ಬಾಲ್ಯ ವಿವಾಹವಾಗಿತ್ತು. ಪತಿ ಜ್ಯೋತಿರಾವ್ ಫುಲೆ ಅವರು ವಿದ್ಯಾವಂತರಾಗಿದ್ದ ಕಾರಣ, ತಮ್ಮ ಪತ್ನಿಗೂ ಅಕ್ಷರಾಭ್ಯಾಸ ಮಾಡಿಸಿದರು ಎಂದು ನೆನಪಿಸಿದರು.

ಹೆಣ್ಣು ಮಕ್ಕಳಿಗೆ ಶಿಕ್ಷಣ ಕಲಿಸಲು ಮುಂದಾದರು. ಸಮಾಜದಲ್ಲಿ ಸಾಕಷ್ಟು ಟೀಕೆ- ಟಿಪ್ಪಣಿಗಳು ಬಂದರೂ ಸಹ ಯಾವುದಕ್ಕೂ ಸಾವಿತ್ರಿಬಾಯಿ ಫುಲೆ ಅವರು ಎದೆಗುಂದದೆ ಹೋರಾಟ ಮುಂದುವರೆಸಿದರು ಎಂದು ತಿಳಿಸಿದರು.

ವಿರಾಜಪೇಟೆ ತಾಲೂಕಿನ ಸಂತ ಅನ್ನಮ್ಮ ಪ್ರೌಢಶಾಲೆಯ ಶಿಕ್ಷಕ ಕ್ಲಿಪರ್ಡ್ ಡಿ ಮೆಲ್ಲೋ, ಜಿ.ಪಂ ಸಿಇಒ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ ಉಪಾಧ್ಯಕ್ಷ ಲೋಕೇಶ್ವರಿ ಗೋಪಾಲ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕಾರ್ಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದಟಿ.ಎನ್.ಗಾಯತ್ರಿ(ಮಡಿಕೇರಿ), ಶ್ರೀಶೈಲ ಬೀಳಗಿ (ವಿರಾಜಪೇಟೆ), ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರ ಕುಂತಿ ಬೋಪಯ್ಯ, ಎಚ್.ಕೆ.ಪಾಂಡು (ಸೋಮವಾರಪೇಟೆ), ಕೂಡಿಗೆ ಡಯಟ್‌ನ ಹಿರಿಯ ಉಪನ್ಯಾಸಕ ಮಲ್ಲೇಸ್ವಾಮಿ ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಚಿತ್ರಕಲಾವಿದರಾದ ಬಿ.ಆರ್.ಸತೀಶ್ ಅವರು ಸಾವಿತ್ರಿಬಾಯಿ ಫುಲೆ ಅವರ ಚಿತ್ರ ರಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT