ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ನಿಗದಿಯಾಗಿರುವ ಕಾರ್ಯಕ್ರಮಗಳನ್ನು ಕಾಲಮಿತಿಯಲ್ಲಿ ಅರ್ಹರಿಗೆ ತಲುಪಿಸಿ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಸಂಬಂಧ ಗುರುವಾರ ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ‘ಕೃಷಿ ಇಲಾಖೆಯಲ್ಲಿ ಶೇ 50ರಷ್ಟು ಹಾಗೂ ತೋಟಗಾರಿಕಾ ಇಲಾಖೆಯಲ್ಲಿ ಶೇ 80ರಷ್ಟು ಪ್ರಗತಿ ಸಾಧಿಸಲಾಗಿದೆ. ಇನ್ನಷ್ಟು ಪ್ರಗತಿ ಸಾಧಿಸಬೇಕು. ಮಾತ್ರವಲ್ಲ, ಇತರ ಇಲಾಖೆಯ ಅಧಿಕಾರಿಗಳು ಸಹ ಪ್ರಗತಿ ಸಾಧಿಸಲು ಕಾರ್ಯ ಯೋಜನೆ ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.

ಕೆಲವು ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗೆ ಇನ್ನೂ ಗುರಿ ನಿಗದಿಯಾಗಿಲ್ಲ. ಹಣ ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಅದಕ್ಕೋಸ್ಕರ ಕಾಯದೇ ಗುರಿ ನಿಗದಿಯಾಗಿ, ಹಣ ಬಿಡುಗಡೆಯಾದ ಕೂಡಲೇ ಪ್ರಗತಿ ಸಾಧಿಸಬೇಕು ಎಂದರು.

ಯಾವುದೇ ಕಾರಣಕ್ಕೂ ಈ ವಿಷಯದಲ್ಲಿ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೃಷಿ ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ, ಯುವ ಸಬಲೀಕರಣ ಮತ್ತು ಕ್ರೀಡೆ, ಕೈಮಗ್ಗ ಮತ್ತು ಜವಳಿ, ಕಾರ್ಮಿಕ, ಲೋಕೋಪಯೋಗಿ, ಸ್ಥಳೀಯ ಸಂಸ್ಥೆಗಳು, ವಿವಿಧ ಎಂಜಿನಿಯರ್ ವಿಭಾಗಗಳು, ಹೀಗೆ ಹಲವು ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ಸಮುದಾಯ ಮತ್ತು ವೈಯಕ್ತಿಕ ಕಾರ್ಯಕ್ರಮಗಳಿದ್ದು, ಅವುಗಳ ಪ್ರಗತಿ ಸಾಧಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನವನ್ನು ಯಾವುದೇ ಕಾರಣಕ್ಕೂ ವಾಪಸ್ ಕಳುಹಿಸಬಾರದು. ಅರ್ಹರಿಗೆ ಸೌಲಭ್ಯ ತಲುಪಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಲಿಂಗರಾಜ ದೊಡ್ಡಮನಿ, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಚಿನ್, ಸಹಕಾರ ಇಲಾಖೆಯ ಉಪ ನಿಬಂಧಕ ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ, ಪುರಸಭೆ ಮುಖ್ಯ ಅಧಿಕಾರಿಗಳಾದ ನಾಚಪ್ಪ, ಕೃಷ್ಣಪ್ರಸಾದ್, ಜಿಲ್ಲಾ ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕ ಶಿರಾಝ್ ಅಹಮದ್, ಪ್ರವಾಸೋದ್ಯಮ ಇಲಾಖೆಯ ಜತಿನ್ ತಮ್ಮ ತಮ್ಮ ಇಲಾಖೆಯ ಪ್ರಗತಿ ಕುರಿತು ಮಾಹಿತಿ ನೀಡಿದರು.

ಹಣ ಬಿಡುಗಡೆವರೆಗೂ ಕಾಯದೇ ಕಳೆದ ವರ್ಷ ನಿಗದಿಯಾದ ಗುರಿಗೆ ಸಂಬಂಧಿಸಿದಂತೆ ಈ ವರ್ಷವೂ ಅಗತ್ಯ ಸಿದ್ಧತಾ ಕ್ರಮಗಳನ್ನು ಇಲಾಖಾ ಅಧಿಕಾರಿಗಳು ಕೈಗೊಳ್ಳಬೇಕು
ವೆಂಕಟ್ ರಾಜಾ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.