ಸೋಮವಾರಪೇಟೆ: ಗೊಂದಲ ಹಾಗೂ ಪರಸ್ಪರ ಕೆಸರೆರೆಚಾಟಕ್ಕೆ ಕಾರಣವಾಗಿದ್ದ ಪರಿಶಿಷ್ಟ ಸಮುದಾಯದ ಒಳಮೀಸಲಾತಿ ಸಮಸ್ಯೆಯನ್ನು ಯಶಸ್ವಿಯಾಗಿ ಬಗೆಹರಿಸಿ ವಿಧಾನಸಭೆಯಲ್ಲಿ ಮಂಡಿಸಿದ ರಾಜ್ಯದ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರ ಕ್ರಮ ಸ್ವಾಗತಾರ್ಹ ಎಂದು ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಅಭಿಮತ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಸಮುದಾಯದ ಮುಖಂಡ ಟಿ.ಈ. ಸುರೇಶ್ ಮಾತನಾಡಿ, ‘ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯದ 101 ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಿದ ನಂತರ ಕೆಲ ಅಧಿಕಾರಿಗಳು ಕಣ್ತಪ್ಪಿನಿಂದ ಮಾಡಿದ ಅಧಿಸೂಚನೆಗಳು ರಾಜ್ಯದಾದ್ಯಂತ ಪರಿಶಿಷ್ಟರೊಳಗಿನ ಅಪನಂಬಿಕೆಗಳಿಗೆ ಗುರಿ ಮಾಡಿದ್ದವು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವರ ಮೇಲೆ ಭಾರಿ ಅಸಮಾಧಾನ ಸೃಷ್ಟಿಯಾಗುವಂತೆ ಪಿತೂರಿಯೂ ನಡೆದಿತ್ತು. ಇದೀಗ ಎಲ್ಲರೂ ಒಪ್ಪುವಂತಹ ಮೀಸಲಾತಿಯನ್ನು ಎಚ್.ಸಿ. ಮಹದೇವಪ್ಪ ಮಂಡಿಸಿರುವುದು ಶ್ಲಾಘನೀಯ’ ಎಂದರು.

‘ಅಧಿಕಾರಿಗಳು, ವಿಷಯ ಪರಿಣಿತರು ಮತ್ತು ಸಮುದಾಯದ ಮುಖಂಡರ ಜೊತೆ ಸರಣಿ ಸಭೆಗಳನ್ನು ನಡೆಸಿದ್ದಲ್ಲದೆ, ನಾಲ್ವಡಿ ಕೃಷ್ಣರಾಜರ ಕಾಲದ ವರದಿಗಳಿಂದ ಹಿಡಿದು ಈವರೆಗಿನ ಹಲವು ಆಯೋಗಗಳ ಬಗ್ಗೆ ಅಧ್ಯಯನ ಮಾಡಿ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸಿರುವುದು ಇಡೀ ಸಮುದಾಯಕ್ಕೆ ಒಳಿತು ಉಂಟು ಮಾಡಿದೆ’ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಚ್.ಸಿ. ಮಹದೇವಪ್ಪ ಬಳಗದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಪಿ. ವಿಜಯಕುಮಾರ್, ಕುಶಾಲನಗರ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ಮಂಜುನಾಥ್, ಸಮುದಾಯದ ಮುಖಂಡ ಹಾರೆಹೊಸೂರು ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-51-979701134

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.