ಶನಿವಾರ, ಡಿಸೆಂಬರ್ 3, 2022
28 °C

ಪ್ರವೀಣ್ ನೆಟ್ಟಾರು ಹತ್ಯೆ: ಪ್ರಮುಖ ಆರೋಪಿಗಾಗಿ ಚುರುಕುಗೊಂಡ ಶೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಇಲ್ಲಿನ ಗದ್ದಿಗೆ ಸಮೀಪದ ನಿವಾಸಿ ತುಫೈಲ್‌ಗಾಗಿ ಪೊಲೀಸರು ಶೋಧಕಾರ್ಯವನ್ನು ಚುರುಕುಗೊಳಿಸಿದ್ದಾರೆ.

ರಾಷ್ಟ್ರೀಯ ಭದ್ರತಾ ಏಜೆನ್ಸಿ ಈತನ ಸುಳಿವು ನೀಡಿದವರಿಗೆ ₹ 5 ಲಕ್ಷ ಬಹುಮಾನ ಘೋಷಿಸಿದೆ. ಪೊಲೀಸರು ಮಡಿಕೇರಿ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಜಾಲಾಡಿದರೂ ಆತನ ಸುಳಿವು ಲಭ್ಯವಾಗುತ್ತಿಲ್ಲ.

ವಿದೇಶಕ್ಕೆ ತೆರಳಿರುವ ಶಂಕೆಯೂ ಇದ್ದು, ಈ ಹಿನ್ನೆಲೆಯಲ್ಲೂ ನಿಗಾ ವಹಿಸಲಾಗಿದೆ. ಸೆಪ್ಟೆಂಬರ್‌ನಲ್ಲೂ ಎನ್‌ಐಎ ಎರಡು ಬಾರಿ ನಗರದಲ್ಲಿ ಶೋಧ ಕಾರ್ಯ ನಡೆಸಿ ಬರಿಗೈಯಲ್ಲಿ ವಾಪಸ್ ತೆರಳಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.