ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ವ ಉದ್ಯೋಗ ವಿಕಸಿತ ಭಾರತ ನಿರ್ಮಾಣಕ್ಕೆ ರಹದಾರಿ: ಪಿ.ಗಂಗಾಧರ್ ನಾಯಕ

Published 29 ಆಗಸ್ಟ್ 2024, 5:17 IST
Last Updated 29 ಆಗಸ್ಟ್ 2024, 5:17 IST
ಅಕ್ಷರ ಗಾತ್ರ

ಮಡಿಕೇರಿ: ‘ವಿಕಸಿತ ಭಾರತ ನಿರ್ಮಾಣವು ಸ್ವಂತ ಉದ್ಯಮ ಆರಂಭಿಸಿ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಂಡರೆ ಸಾಧ್ಯವಾಗುತ್ತದೆ’ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪಿ.ಗಂಗಾಧರ್ ನಾಯಕ ಪ್ರತಿಪಾದಿಸಿದರು.

ನಗರದ ಗಾಂಧಿ ಭವನದಲ್ಲಿ ಖಾದಿ ಗ್ರಾಮೋದ್ಯೋಗ ಆಯೋಗ ಮತ್ತು ಮೈಸೂರಿನ ಸರ್ವೋದಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಬುಧವಾರ ನಡೆದ ಪ್ರಧಾನಮಂತ್ರಿ ಅವರ ಉದ್ಯೋಗ ಸೃಜನ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರದ ಹಲವು ಯೋಜನೆಗಳ ಸೌಲಭ್ಯ ಪಡೆಯಲು ಪ್ರತಿಯೊಬ್ಬರೂ ಮುಂದಾಗಬೇಕು. ಸ್ವಉದ್ಯೋಗ ಕೈಗೊಳ್ಳುವುದರಿಂದ ದೇಶಕ್ಕೂ ಲಾಭವಿದೆ, ದೇಶದ ಆರ್ಥಿಕ ಪ್ರಗತಿಗೂ ಕಾರಣವಾಗುತ್ತದೆ. ಬ್ಯಾಂಕ್ ಜೊತೆಗೆ ವ್ಯವಹಾರ ಮಾಡುವಾಗ ಆರ್ಥಿಕ ಶಿಸ್ತು ಮುಖ್ಯ, ಸ್ವ ಉದ್ಯೋಗ ಕೈಗೊಳ್ಳುವುದರಿಂದ ಉದ್ಯಮಿಯಾಗಿ ಬೆಳೆದು ಆರ್ಥಿಕವಾಗಿ ಪ್ರಗತಿ ಹೊಂದಬಹುದು. ಪ್ರತಿಯೊಬ್ಬರೂ ಸರ್ಕಾರದ ಸೌಲಭ್ಯವನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕು ಎಂದು ಕರೆ ನೀಡಿದರು.

ಖಾದಿ ಗ್ರಾಮೋದ್ಯೋಗ ಇಲಾಖೆಯ ಅಧಿಕಾರಿ ರಾಮಕೃಷ್ಣ ಆಚಾರ್ ಮಾತನಾಡಿ, ‘ಸೇವಾ ವಲಯ ಮತ್ತು ಉತ್ಪಾದನಾ ವಲಯ ಎರಡು ವಿಧದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ. ಪ್ರಧಾನಮಂತ್ರಿ ಸ್ವಉದ್ಯೋಗ ಯೋಜನೆಯಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಜನತೆಗೆ ಅನುಕೂಲವಾಗಲಿದೆ’ ಎಂದು ಹೇಳಿದರು.

ಬೆಂಗಳೂರಿನ ಖಾದಿ ಗ್ರಾಮೋದ್ಯೋಗ ಇಲಾಖೆಯ ಸಹಾಯಕ ನಿರ್ದೇಶಕ ವಿ.ಆರ್.ಮರಾಠಿ ಮಾತನಾಡಿ, ‘ಪ್ರಧಾನಮಂತ್ರಿ ಸ್ವ ಉದ್ಯೋಗ ಯೋಜನೆಯ ಸೌಲಭ್ಯವು ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಪ್ರಗತಿ ಸಾಧಿಸಬೇಕು. ಸ್ವಂತ ಉದ್ಯೋಗ ಮಾಡುವ ಕನಸು ಇದ್ದವರಿಗೆ ಪ್ರಧಾನಮಂತ್ರಿ ಸ್ವ ಉದ್ಯೋಗ ಯೋಜನೆಯಿಂದ ಹಲವು ಪ್ರಯೋಜನವಾಗಲಿದೆ. ಅರ್ಜಿ ಸಲ್ಲಿಸುವ ಮೂಲಕ ಸೌಲಭ್ಯಗಳ ಸಹಾಯ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ನಿವೃತ್ತ ಬ್ಯಾಂಕ್ ಅಧಿಕಾರಿ ಹಾಗೂ ಸೇವಾ ಭಾರತಿ ಕಾರ್ಯದರ್ಶಿ ಡಿ.ಎಚ್.ತಮ್ಮಪ್ಪ ಮಾತನಾಡಿ, ‘ಕನಸಿದ್ದರೆ ಸಾಧನೆ ಮಾಡಲು ಸಾಧ್ಯ, ಜೊತೆಗೆ ಕೌಶಲ್ಯತೆಯೂ ಇರಬೇಕು. ಕನಸು ಮತ್ತು ಕೌಶಲ್ಯತೆ ಇದ್ದಾಗ ಬ್ಯಾಂಕುಗಳು ಸಾಲ ಸೌಲಭ್ಯ ನೀಡುತ್ತವೆ. ಪ್ರಾಮಾಣಿಕತೆ ಪ್ರತಿಯೊಬ್ಬರಿಗೂ ಇರಬೇಕು’ ಎಂದು ಅಭಿಪ್ರಾಯಪಟ್ಟರು.

ಸರ್ವೋದಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಶ್, ಮುಖಂಡರಾದ ಮಹಾದೇವ್, ಟ್ರಸ್ಟ್ ನಿರ್ದೇಶಕಿ ಭಾಗ್ಯ ರಾಜೇಶ್ ಭಾಗವಹಿಸಿದ್ದರು.

ಪ್ರತಿಯೊಬ್ಬರು ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯಿರಿ ಸ್ವಾವಲಂಬಿ ಬದುಕು ನಡೆಸಲು ಮುಂದಾಗಿ ಸ್ವಉದ್ಯೋಗ ಯೋಜನೆಯಿಂದ ಜನರಿಗೆ ಅನುಕೂಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT