ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿಗೆ ಪ್ರತ್ಯೇಕ ಲೋಕಸಭಾ ಸ್ಥಾನ ಬೇಕು; ಎಂ.ಸಿ.ನಾಣಯ್ಯ

Published 31 ಜನವರಿ 2024, 3:03 IST
Last Updated 31 ಜನವರಿ 2024, 3:03 IST
ಅಕ್ಷರ ಗಾತ್ರ

ಮಡಿಕೇರಿ: ‘ಕೊಡಗು ಜಿಲ್ಲೆಗೆ ಪ್ರತ್ಯೇಕ ಲೋಕಸಭಾ ಸ್ಥಾನ ನೀಡಬೇಕು’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಎಂ.ಸಿ.ನಾಣಯ್ಯ ಒತ್ತಾಯಿಸಿದರು.

‘ಸ್ವಾತಂತ್ರ್ಯ ಪಡೆದ ನಂತರ ಪ್ರತ್ಯೇಕ ರಾಜ್ಯವಾಗಿದ್ದ ಕೊಡಗು ತನ್ನದೇ ಸರ್ಕಾರವನ್ನೂ ಹೊಂದಿತ್ತು. ಪ್ರತ್ಯೇಕ ಲೋಕಸಭಾ ಮತ್ತು ರಾಜ್ಯಸಭಾ ಸ್ಥಾನಗಳನ್ನೂ ಪಡೆದಿತ್ತು. ಅದನ್ನು ಪ್ರತ್ಯೇಕ ರಾಜ್ಯವಾಗಿ ಉಳಿಸಿಕೊಳ್ಳಲು ಆಗಲಿಲ್ಲ. ಅದಕ್ಕೆ ರಾಜಕೀಯ ಕಾರಣಗಳನ್ನು ಈಗ ಹುಡುಕದೆ, ಪ್ರತ್ಯೇಕ ಲೋಕಸಭಾ ಸ್ಥಾನಕ್ಕಾಗಿ ಎಲ್ಲರೂ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಹೋರಾಡಬೇಕು’ ಎಂದು ಅವರು ಇಲ್ಲಿ ಮಂಗಳವಾರ ಕರೆ ನೀಡಿದರು.

‘ಮುಖ್ಯ ನ್ಯಾಯಮೂರ್ತಿಯಾಗಿದ್ದ ವೆಂಕಟಾಚಲಯ್ಯ ಅವರು ಸಹ ತಮ್ಮ ವರದಿಯಲ್ಲಿ, ಉತ್ತರ ಕರ್ನಾಟಕದ ಮಾದರಿಯಲ್ಲಿ ಕೊಡಗಿಗೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಹೇಳಿದ್ದರು. ಆದರೆ, ಅದೂ ಈವರೆಗೆ ಈಡೇರಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT