ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಮುತ್ತಪ್ಪ ದೇಗುಲದಲ್ಲಿ ನಾಳೆ ಷಷ್ಠಿ ಮಹೋತ್ಸವ

Published 17 ಡಿಸೆಂಬರ್ 2023, 5:36 IST
Last Updated 17 ಡಿಸೆಂಬರ್ 2023, 5:36 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಮುತ್ತಪ್ಪ ದೇವಾಲಯದಲ್ಲಿ ಡಿ. 18ರಂದು ಸುಬ್ರಹ್ಮಣ್ಯಸ್ವಾಮಿ ಷಷ್ಠಿ ಮಹೋತ್ಸವ ನಡೆಯಲಿದೆ.

‘ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ನಡೆಯಲಿರುವ ಈ ಮಹೋತ್ಸವದಲ್ಲಿ ದೇಗುಲದ ಆವರಣದಲ್ಲಿರುವ ಸುಬ್ರಹ್ಮಣ್ಯದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಮೊದಲಾದ ಸೇವೆಗಳು ನಡೆಯಲಿವೆ ಎಂದು ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ  ಅಧ್ಯಕ್ಷ ಟಿ.ಕೆ.ಸುಧೀರ್ ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಳಿಗ್ಗೆ 9 ಗಂಟೆಗೆ ಮುತ್ತಪ್ಪದೇವರ ವೆಳ್ಳಾಟಂ, 10 ಗಂಟೆಗೆ ಗುಳಿಗ ದೇವರ ವೆಳ್ಳಾಟಂ, 10.30ಕ್ಕೆ ಪೋದಿ ದೇವರ ವೆಳ್ಳಾಟಂ, ಮಧ್ಯಾಹ್ನ 12 ಗಂಟೆಗೆ ಸುಬ್ರಹ್ಮಣ್ಯದೇವರ ಶ್ರೀಭೂತ ಬಲಿ, 12.30ಕ್ಕೆ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದರು.

ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, ರಾತ್ರಿ 8 ಗಂಟೆಗೆ ಮಹಾಪೂಜೆಯ ನಂತರ ಪ್ರಸಾದ ವಿತರಣೆ ಇರಲಿದೆ ಎಂದು ಹೇಳಿದರು.

ಸಮಿತಿಯ ಮುಖಂಡರಾದ ಕೆ.ಎಸ್.ರಮೇಶ್, ಗಿರೀಶ್ ಆರಾಧನ, ಪಿ.ವಿನೋದ್, ದೀಪಾ ಕಾವೇರಪ್ಪ, ಸದಾಶಿವ ಶೆಟ್ಟಿ,

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT