ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ: ನಾಗಬನದಲ್ಲಿ ಷಷ್ಠಿ ವಿಶೇಷ ಪೂಜೆ

Published 18 ಡಿಸೆಂಬರ್ 2023, 13:12 IST
Last Updated 18 ಡಿಸೆಂಬರ್ 2023, 13:12 IST
ಅಕ್ಷರ ಗಾತ್ರ

ವಿರಾಜಪೇಟೆ: ಸಮೀಪದ ಹೆಗ್ಗಳದ ಪಾಲ್ಟ್ ಮಕ್ಕಿ ನಾಗಬನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಅಂಗವಾಗಿ ಸೋಮವಾರ ವಿಶೇಷ ಪೂಜಾ ಕಾರ್ಯಗಳು ನಡೆದವು.

ಅರ್ಚಕ ವೇಣುಗೋಪಾಲ್ ಭಟ್ ಅವರು ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಸಂಕಲ್ಪ ಪೂಜೆ ಹಾಗೂ ವಿಶೇಷ ಪ್ರಾರ್ಥನೆಯನ್ನು ಈ ಸಂದರ್ಭ ಮಾಡಲಾಯಿತು. ನಾಗನ ಮೂರ್ತಿಗೆ ಸೀಯಾಳ ಮತ್ತು ಹಾಲಿನ ಅಭಿಷೇಕ ಹಾಗೂ ನಾಗತಂಬಿಲವನ್ನು ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಮಹಾಪೂಜೆಯ ನಂತರ ಪ್ರಸಾದ ವಿನಿಯೋಗ ನಡೆಯಿತು. ಅನ್ನ ಸಂತರ್ಪಣಾ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಸಮೀಪದ ಬೇಟೋಳಿ, ಹೆಗ್ಗಳ, ಬೂದಿಮಾಳ, ರಾಮನಗರ, ವಿರಾಜಪೇಟೆ ಭಾಗದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT