ಮಡಿಕೇರಿ: ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಶತಸಂಭ್ರಮ ಭವನ ನಿರ್ಮಾಣಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಖಾತೆ ಸಚಿವ ಮಧು ಬಂಗಾರಪ್ಪ ಅವರು ಜ.11ರಂದು ಬೆಳಿಗ್ಗೆ 9.30ಕ್ಕೆ ಇಲ್ಲಿನ ಗುರು ಸದನದಲ್ಲಿ ಭೂಮಿಪೂಜೆ ನೆರವೇರಿಸಲಿದ್ದಾರೆ.

ಬಳಿಕ ಬೆಳಿಗ್ಗೆ 10.30ಕ್ಕೆ ಇಲ್ಲಿನ ಗೌಡ ಸಮಾಜದಲ್ಲಿ ಶತಮಾನೋತ್ಸವ ಸಮಾರಂಭವನ್ನು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದು,

ಶತಮಾನೋತ್ಸವ ಸಮಾರಂಭ ಜ.11ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಗೌಡ ಸಮಾಜದಲ್ಲಿ ನಡೆಯಲಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಖಾತೆ ಸಚಿವ ಮಧು ಬಂಗಾರಪ್ಪ ಅವರು ಶತಸಂಭ್ರಮ ಭವನ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉದ್ದೇಶಿತ ಶತಸಂಭ್ರಮ ಕಟ್ಟಡದ ನಕಾಶೆಯನ್ನು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅನಾವರಣಗೊಳಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎಚ್.ಎಸ್.ಚೇತನ್ ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನಗೌಡ ಅವರು ಬೆಳಿಗ್ಗೆ ಸೌಹಾರ್ದ ಸೌರಭ ಕಟ್ಟಡದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಗೌಡ ಸಮಾಜದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಸ್ಮರಣ ಸಂಚಿಕೆ ಬಿಡುಗಡೆ, ಕ್ಯಾಲೆಂಡರ್ ಮತ್ತು ಉಡುಗೊರೆ ಅನಾವರಣ ಮಾಡಲಿದ್ದಾರೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಧನಂಜಯ ಸರ್ಜಿ, ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಲಿ, ಗೌರವಾಧ್ಯಕ್ಷ ನಾಗೇಶ್ ಕೆ., ಕೊಡಗು ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಹೆಚ್.ಡಿ.ರವಿಕುಮಾರ್, ನಿವೃತ್ತ ಪ್ರಾಂಶುಪಾಲ ಪಟ್ಟಡ ಎ.ಪೂವಣ್ಣ ಹಾಗೂ ಮಂಗಳೂರಿನ ಕೆಐಒಸಿಎಲ್ ಲಿಮಿಟೆಡ್ ನ ಡೆಪ್ಯೂಟಿ ಜನರಲ್ ಮ್ಯಾನೇಜರ್ ತೇಲಪಂಡ ಎಂ.ಕಾರ್ಯಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಪಾಲ್ಗೊಳ್ಳಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ 100 ಹಿರಿಯ ಸಹಕಾರಿಗಳನ್ನು ಗೌರವಿಸಲಾಗುವುದು. ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಂಘದ ಉಪಾಧ್ಯಕ್ಷ ಎಚ್.ಆರ್.ಮುತ್ತಪ್ಪ, ನಿರ್ದೇಶಕರಾದ ಎಚ್.ಎನ್.ಮಂಜುನಾಥ್, ಪುದಿಯನೆರವನ ರೇವತಿ ರಮೇಶ್, ಎನ್.ಸಿ.ದೇವಾನಂದ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಸಿ.ನಟೇಶ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.