ಸಿದ್ದಾಪುರ: ಮನೆಯ ಹಿಂಭಾಗದಲ್ಲಿ ಕೆಲಸ ಮಾಡುವ ವೇಳೆ ಗುಂಡು ತಗುಲಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಅಮ್ಮತ್ತಿ ಸಮೀಪದ ಆನಂದಪುರದಲ್ಲಿ ಮಂಗಳವಾರ ನಡೆದಿದೆ.

ಆನಂದಪುರ ನಿವಾಸಿ ಅನೇಸ್ಟ ಡಿ ಕುನ್ಹ (63) ಎಂಬವರು ಮನೆಯ ಹಿಂಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಕಿಡಿಗೇಡಿ ಹಾರಿಸಿದ ಗುಂಡು ಅನೆಸ್ಟ ಅವರ ಎದೆಗೆ ತಗುಲಿದೆ. ಅವರನ್ನು ಕೂಡಲೇ ಅಮ್ಮತ್ತಿ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿಗೆ ಕರೆದೊಯ್ಯಲಾಗಿದೆ. ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.