ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಂಸ ಸೇವಿಸಿ ದೇವಾಲಯಕ್ಕೆ ಸಿದ್ದರಾಮಯ್ಯ? ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ

Last Updated 21 ಆಗಸ್ಟ್ 2022, 15:51 IST
ಅಕ್ಷರ ಗಾತ್ರ

ಮಡಿಕೇರಿ: ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಲು ಬಂದಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಂಸಾಹಾರ ಸೇವಿಸಿ ಕೊಡ್ಲಿಪೇಟೆಯ ಬಸವೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದರು ಎಂದು ಆರೋಪಿಸಲಾಗುತ್ತಿದೆ. ಈ ಬಗ್ಗೆ ಸಂದೇಶಗಳು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿವೆ.

ಪಕ್ಷದ ಮುಖಂಡರೊಬ್ಬರ ಮನೆಯಲ್ಲಿ ಸಿದ್ಧಪಡಿಸಿದ್ದ ನಾಟಿ ಕೋಳಿ ಭೋಜನವನ್ನು ಸುದರ್ಶನ ಪ್ರವಾಸಿ ಮಂದಿರದಲ್ಲಿ ಸಿದ್ದರಾಮಯ್ಯ ಸೇವಿಸಿದ್ದರು. ಬಳಿಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ತಿನ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ‘ಅಂದು ನಾಟಿಕೋಳಿ ಸಾಂಬಾರು ತೆಗೆದುಕೊಂಡು ಹೋಗಿದ್ದು ನಿಜ. ಆದರೆ, ಕೊಡಗಿನ ವಿಶೇಷ ಅಡುಗೆಯಾದ ಕಣಿಲೆ ಸಾರು, ಅಕ್ಕಿರೊಟ್ಟಿಯನ್ನಷ್ಟೇ ಸೇವಿಸಿದ್ದರು. ಮಾಂಸ ತಿಂದಿರಲಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT