ಬುಧವಾರ, ಅಕ್ಟೋಬರ್ 28, 2020
18 °C

ವಿರಾಜಪೇಟೆ: ಎರಡು ತಲೆ ಹಾವು ಮಾರಾಟಕ್ಕೆ ಯತ್ನ, ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿರಾಜಪೇಟೆ/ಗೋಣಿಕೊಪ್ಪಲು: ಸಮೀಪದ ಆನಂದಪುರದ ಬಳಿ ಬುಧವಾರ ರಾತ್ರಿ ಎರಡು ತಲೆ ಹಾವನ್ನು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ.

ಮೈಸೂರಿನ ಶಾಂತಿನಗರ ನಿವಾಸಿ ಸೈಯದ್ ಮೋಮಿನ್ ಬಂಧಿತ ಆರೋಪಿ.

ದಾವಣಗೆರೆ ಜಿಲ್ಲೆಯ ಚನ್ನಗಿರಿಯ ನಲ್ಲೂರಿನಿಂದ ತಂದ ಹಾವನ್ನು ಸಮೀಪದ ಆನಂದಪುರದ ತಂಗುದಾಣದ ಬಳಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಬಂಧಿಸಿದ್ದಾರೆ.

ಆರೋಪಿಯಿಂದ ನಾಲ್ಕು ಅಡಿ ಉದ್ದದ ಹಾವನ್ನು ವಶಪಡಿಸಿಕೊಂಡಿದ್ದಾರೆ. ಸೈಯದ್‌ನನ್ನು  ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಅಧೀಕ್ಷಕ ಸುರೇಶ್ ಬಾಬು ಮಾರ್ಗದರ್ಶನದಲ್ಲಿ, ಎಸ್ಐ ಸಿ.ಯು.ಸವಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಕೆ.ಬಿ.ಸೋಮಣ್ಣ, ಟಿ.ಪಿ.ಮಂಜುನಾಥ್, ಎಂ.ಬಿ.ಗಣೇಶ್, ಪಿ.ಬಿ.ಮೊಣ್ಣಪ್ಪ ಹಾಗೂ ಸಿ.ಎಂ. ರೇವಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು