ಜೆಡಿಎಸ್‌ನಿಂದ ಗೆಲುವು ದಾಖಲಿಸಿ, ಈಗಾಗಲೇ ಬಿಜೆಪಿಗೆ ಸೇರಿರುವ ನಾಗರತ್ನ ಅವರು ಅಧ್ಯಕ್ಷರಾಗುವ ಅವಕಾಶ ಹೆಚ್ಚಾಗಿದೆ ಎಂದು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗುತ್ತಿದೆ. ಮತ್ತೊಂದೆಡೆ, ಜೆಡಿಎಸ್‌ನಿಂದ ಗೆಲುವು ದಾಖಲಿಸಿದ್ದ ಜಯಂತಿ ಶಿವಕುಮಾರ್ ಕೂಡ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಜೊತೆಗೆ, ಮೋಹಿನಿ ಸಹ ಸ್ಪರ್ಧಿಸುವ ಇಚ್ಛೆ ಹೊಂದಿದ್ದಾರೆ. ಮೈತ್ರಿಕೂಟದ ನಾಯಕರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಎಂಬುದನ್ನು ಕಾದುನೋಡಬೇಕಿದೆ. ಈ ಮಧ್ಯೆ ಕಾಂಗ್ರೆಸ್ ಹಿರಿಯ ಸದಸ್ಯೆ ಶೀಲಾ ಡಿಸೋಜ ಸಹ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಹೀಗಾಗಿ, ಚುನಾವಣಾ ಕಣ ಭಾರಿ ಕುತೂಹಲ ಕೆರಳಿಸಿದೆ.