ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೋಪಾಲಪುರ ಶಾಲೆಯಲ್ಲಿ ರಕ್ತದಾನ ಶಿಬಿರ

Published 10 ಜುಲೈ 2024, 5:40 IST
Last Updated 10 ಜುಲೈ 2024, 5:40 IST
ಅಕ್ಷರ ಗಾತ್ರ

ಸೋಮವಾರಪೇಟೆ: ತಾಲ್ಲೂಕಿನ ನಿಡ್ತ ಗ್ರಾಮ ಪಂಚಾಯಿತಿ, ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಗೋಪಾಲಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಶಿಬಿರ ಈಚೆಗೆ ನಡೆಯಿತು.

ಮಡಿಕೇರಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಕರುಂಬಯ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ,  ಅರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಬಹುದರೊಂದಿಗೆ, ದಾನಿಯ ಆರೋಗ್ಯವೂ ವೃದ್ಧಿಸುತ್ತದೆ. ಡೆಂಗಿ ಜ್ವರ ಹೆಚ್ಚುತ್ತಿದ್ದು ಬಿಳಿ ರಕ್ತಕಣದ ಅವಶ್ಯಕತೆ ಇದೆ ಎಂದರು.   25 ಮಂದಿ ರಕ್ತದಾನ ಮಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು, ಮುಖ್ಯ ಶಿಕ್ಷಕಿ ರೇಣುಕಾ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಬಲ್ಕಿಸ್ ಬಾನು, ಧರಣೇಶ್ ರಾಜ್  ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT