ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲುಸೆ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಚಾಲನೆ

Published 9 ಮೇ 2024, 8:09 IST
Last Updated 9 ಮೇ 2024, 8:09 IST
ಅಕ್ಷರ ಗಾತ್ರ

ಸೋಮವಾರಪೇಟೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿ ತಾಲ್ಲೂಕಿನ ಹಂಡ್ಲಿ ಹಾಗೂ ಹುಲುಸೆ ಕೆರೆ ಅಭಿವೃದ್ದಿ ಸಮಿತಿ ವತಿಯಿಂದ ನಮ್ಮೂರು-ನಮ್ಮ ಕೆರೆ ಕಾರ್ಯಕ್ರಮದಡಿ ಹುಲುಸೆ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಮಾತನಾಡಿ,  ಹನಿ ನೀರಿಗೂ ಇಂದು ಪರದಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಜೀವ ಜಲದ ರಕ್ಷಣೆ ಆಗಬೇಕು. ಕೆರೆಗಳ ಪುನಶ್ಚೇತನದೊಂದಿಗೆ ನೀರನ್ನು ಉಳಿಸಬೇಕಾದದು ನಮ್ಮ ಕರ್ತವ್ಯವಾಗಿದೆ ಎಂದರು.

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಭಗವಾನ್, ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ರೋಹಿತ್, ಕೆರೆ ಅಭಿವೃದ್ದಿ ಸಮಿತಿ ಅಧ್ಯಕ್ಷ ಭರತ್, ಹಂಡ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅಶೋಕ್, ಗ್ರಾಮ ಪಂಚಾಯಿತಿ ಸದಸ್ಯರುಗಳು, ಪ್ರಗತಿ ಬಂಧು ಮತ್ತು ಸ್ವ ಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT