ಸೋಮವಾರಪೇಟೆ: ತಾಲ್ಲೂಕಿನಲ್ಲಿ ಸಿ ಆ್ಯಂಡ್ ಡಿ ಜಾಗದಲ್ಲಿ ಸೆಕ್ಷನ್-4 ಸರ್ವೆಗೆ ನೋಟಿಸ್ ಜಾರಿಯಾಗುತ್ತಿದ್ದು, ರೈತರನ್ನು ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಈ ನೀತಿಯನ್ನು ಖಂಡಿಸಿ ಆ.11ರಂದು ಸೋಮವಾರಪೇಟೆ ತಾಲ್ಲೂಕು ಬಂದ್ಗೆ ಕರೆ ನೀಡಲಾಗುವುದು’ ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್ ತಿಳಿಸಿದರು.

ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ನಡೆದ ರೈತರ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ‘ರೈತರು ಹೋರಾಟ ತೀವ್ರಗೊಳಿಸುವುದು ಅನಿವಾರ್ಯವಾಗಿದೆ. ಈಗಾಗಲೇ ಸಮಿತಿಯಿಂದ ಹೋರಾಟಗಳು ನಡೆಯುತ್ತಿದ್ದು, ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ಆದರೂ, ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಬಂದ್ಗೆ ಕರೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಸಮಿತಿಯ ಕಾನೂನು ಸಲಹೆಗಾರ ಬಿ.ಜೆ. ದೀಪಕ್, ಕಾರ್ಯದರ್ಶಿ ಯೋಗೇಂದ್ರ ಚೌಡ್ಲು, ಪದಾಧಿಕಾರಿಗಳಾದ ಮಿಥುನ್ ಹರಗ, ದಿವಾಕರ್ ಕೂತಿ, ರೈತ ಸಂಘದ ಅಧ್ಯಕ್ಷ ಕೆ.ಎಂ.ದಿನೇಶ್, ಚೌಡ್ಲು ಫ್ಯಾಕ್ಸ್ ಅಧ್ಯಕ್ಷ ಕೆ.ಟಿ.ಪರಮೇಶ್, ಮಾಜಿ ಎಂಎಲ್ಸಿ ಎಸ್.ಜಿ.ಮೇದಪ್ಪ, ಎಸ್.ಬಿ.ಭರತ್, ನಂದಕುಮಾರ್ ಹಾಗೂ ಮುಖಂಡರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.