ಸೋಮವಾರಪೇಟೆ: ಬೇಳೂರು ಬಾಣೆ ರಕ್ಷಣಾ ಹೋರಾಟ ಸಮಿತಿ ಸಭೆ ಸಮಿತಿ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಪತ್ರಿಕಾಭವನದಲ್ಲಿ ನಡೆಯಿತು.

ಪೈಸಾರಿ ಭೂಮಿ, ಮಠಕ್ಕೆ ಸೇರಿದ ಜಾಗ ಹಾಗೂ ಊರೊಡುವೆ ಜಾಗಕ್ಕೆ ಅನಧಿಕೃತವಾಗಿ ಬೇಲಿ ಹಾಕಿರುವುದನ್ನು ತೆಗೆಸಲು ತಹಶೀಲ್ದಾರ್ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿಗೆ ಮನವಿ ಮಾಡಲು ಹಾಗೂ 7 ದಿನಗಳ ಸಮಯ ನೀಡಿ, ಬೇಲಿ ತೆಗೆಸಲು ವಿಫಲರಾದಲ್ಲಿ ಹೋರಾಟದ ದಾರಿ ಹಿಡಿಯಬೇಕಾಗುತ್ತದೆ ಎಂದು ಸಭೆ ತೀರ್ಮಾನಿಸಿತು.

ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಿದರೂ, ಯಾವುದೇ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಮುಂದಾಗುತ್ತಿಲ್ಲ ಎಂಬ ಅಸಮಾಧಾನ ಸಭೆಯಲ್ಲಿ ವ್ಯಕ್ತವಾಯಿತು.

ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ್, ಆಟೊ ಚಾಲಕ ರವೀಶ್, ಉದ್ಯಮಿ ಮಿಥುನ್ ಹಾನಗಲ್ಲು, ಬೇಳೂರು ಗ್ರಾಮಸ್ಥ ರಾಜಣ್ಣ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-51-1227311506

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.