ಸೋಮವಾರಪೇಟೆ: ರಾಜ್ಯದಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಒತ್ತಾಯಿಸಿ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ‘ರಾಜ್ಯದಲ್ಲಿ ಆರ್ಥಿಕವಾಗಿ ದಿವಾಳಿಯಾಗಿರುವ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯಸರ್ಕಾರ ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವಲ್ಲಿ ನಿರತರಾಗಿದೆ. ಬಿಟ್ಟಿ ಭಾಗ್ಯಗಳಿಂದ ಆರ್ಥಿಕವಾಗಿ ದಿವಾಳಿಯಾಗಿದ್ದು ಕೆಎಸ್ಆರ್ ಟಿಸಿ ಸೇರಿದಂತೆ ಹಲವು ಇಲಾಖೆಯ ಸಿಬ್ಬಂದಿಗೆ ಸಂಬಳ ನೀಡಲು ಹಣವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಆರೋಪಿಸಿದರು.

ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ರಸ್ತೆಗಳು ಗುಂಡಿ ಬಿದ್ದು ಹಾಳಾಗಿದೆ ಆದರೂ ಗುಂಡಿ ಮುಚ್ಚದೆ ಜಾಣ ಕುರುಡು ಪ್ರದರ್ಶಿಸಲಾಗುತ್ತಿದೆ. ಮಳೆ ಗಾಲಕ್ಕೂ ಮುನ್ನ ಗುಂಡಿ ಬಿದ್ದಿರುವ ರಸ್ತೆಗಳನ್ನು ಸರಿಪಡಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಬಿಜೆಪಿ ಕೊಡಗು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಭಾರತೀಶ್ ಮಾತನಾಡಿ, ‘ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬ ಅನುಮಾನ ಜನರಲ್ಲಿ ಕಾಡತೊಡಗಿದೆ. ಸರ್ಕಾರಿ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಡೆಸದಿರುವುದರಿಂದ ರಾಜ್ಯದಲ್ಲಿ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ’ ಎಂದರು.

ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವಿ.ಕೆ.ಲೋಕೇಶ್, ಮನುಕುಮಾರ್ ರೈ, ಅನಂತ್ ಕುಮಾರ್, ಮಂಡಲ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ವಿರೂಪಾಕ್ಷ, ಉಪಾಧ್ಯಕ್ಷೆ ಸವಿತಾ ಸತೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-51-1067414947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.