ಸೋಮವಾರಪೇಟೆ: ‘ನಾವು ಸಂಸ್ಥೆ ಪ್ರತಿಷ್ಠಾನ’ ಹಾಗೂ ‘ಗುಡ್ ಮೈಂಡ್ಸ್’ ಸಂಸ್ಥೆಗಳ ಸಹಯೋಗದಲ್ಲಿ 15 ದಿನಗಳಿಂದ ಪಟ್ಟಣದ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ‘ಮಕ್ಕಳ ಬಾಲ್ಯ ಕಟ್ಟುವ ಹಬ್ಬ’ ಮಕ್ಕಳ ಶಿಬಿರ ಶನಿವಾರ ಮುಕ್ತಾಯಗೊಂಡಿತು.

ಮಕ್ಕಳು ತಾವೇ ರಚಿಸಿದ ಕವಿತೆಗಳು, ಕಥೆಗಳು, ನಾಟಕಗಳು, ನಟನೆ, ನಿರೂಪಣೆ ಹಾಗೂ ನೃತ್ಯಗಳ ಮೂಲಕ ತಮ್ಮ ಕಲಾತ್ಮಕ ಸಾಮರ್ಥ್ಯವನ್ನು ಪ್ರದರ್ಶಿಸಿ ಗಮನ ಸೆಳೆದರು. ಗ್ರಾಮೀಣ ಆಟಗಳನ್ನು ಕಲಿತು ಸಂಭ್ರಮಿಸಿದರು.

ಸಂಸ್ಥೆಯ ಕಾರ್ಯಕಾರಿ ನಿರ್ದೇಶಕಿ ಸುಮನಾ ಮಾತನಾಡಿ, ‘ಈ ಅವಧಿಯಲ್ಲಿ ಮಕ್ಕಳ ಸೃಜನಾತ್ಮಕ ಮತ್ತು ಪ್ರತಿಭೆಯನ್ನು ಉತ್ತೇಜಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳನ್ನು ಹೋಲಿಕೆ ಮಾಡುವುದಕ್ಕಿಂತ ಅವರ ಸ್ವಭಾವ ಮತ್ತು ಆಸಕ್ತಿಗಳಿಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ. ಮಕ್ಕಳನ್ನು ಇರುವಂತೆ ಸ್ವೀಕರಿಸಬೇಕಿದೆ. ಎಲ್ಲಾ ಮಕ್ಕಳ ವಿಭಿನ್ನ ಎಂಬುದನ್ನು ನಾವೆಲ್ಲರೂ ಅರಿತುಕೊಳ್ಳಬೇಕು’ ಎಂದು ಹೇಳಿದರು.

‘ಪ್ರತಿಯೊಬ್ಬ ಮಗುವಿನ ವೈಶಿಷ್ಟ್ಯವನ್ನು ಗೌರವಿಸಬೇಕು. ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವುದರ ಜೊತೆಗೆ, ಅವರ ಆಲೋಚನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ವೇದಿಕೆಯನ್ನು ಒದಗಿಸುವುದು ಈ ಹಬ್ಬದ ಮುಖ್ಯ ಉದ್ದೇಶವಾಗಿತ್ತು’ ಎಂದು ಹೇಳಿದರು.

ಸಂಸ್ಥೆಯ ಸಂಸ್ಥಾಪಕ ಗೌತಮ್ ಕಿರಗಂದೂರು ಮಾತನಾಡಿ, ‘ಮಕ್ಕಳ ಸೃಜನಶೀಲತೆ ಸಮಾಜದ ಅಭಿವೃದ್ಧಿಗೆ ದಾರಿಯಾಗುತ್ತದೆ’ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾದ ಡಾ. ಸಂಜೀವ್ ಕುಮಾರ್ ಮತ್ತು ಸಾಮಾಜಿಕ ಕಾರ್ಯಕರ್ತ ಪದ್ಮನಾಭ ಅವರು ಮಕ್ಕಳ ಮನೋವಿಕಾಸದ ಬಗ್ಗೆ ಮಾರ್ಗದರ್ಶನ ನೀಡಿದರು.

ಹಬ್ಬದ ಅಂಗವಾಗಿ ‘ಹಕ್ಕಿಗೊಂದು ಗುಟುಕು-2026’ ರ ಅಭಿಯಾನದಲ್ಲಿ ಭಾಗವಹಿಸಿ ವಿಜೇತರಾದ ಕಾಸರಗೋಡಿನ ಕಿರಣ್, ಉಡುಪಿಯ ಅನಾಘ ಅವರಿಗೆ ಬಹುಮಾನ ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-51-1463859272

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.