ಸೋಮವಾರಪೇಟೆ: ತಾಲ್ಲೂಕು ಒಕ್ಕಲಿಗರ ಸಂಘ ಮತ್ತು ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ವತಿಯಿಂದ ಕಾಫಿ ತೋಟಗಳ ಮಣ್ಣಿನ ಪರೀಕ್ಷೆ ಮತ್ತು ಮಾಹಿತಿ ಕಾರ್ಯಾಗಾರ ಏ. 27ರಂದು ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎಂ.ಲವ ತಿಳಿಸಿದರು.

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣ್ಣು ಪರೀಕ್ಷೆ ಮಾಡಿದರೆ ಮಣ್ಣಿಗ ಆರೋಗ್ಯದ ಬಗ್ಗೆ ಮಾಹಿತಿ ಸಿಗುತ್ತದೆ. ಮಣ್ಣು ಪರೀಕ್ಷೆ ಮಾಡಿದ ತಕ್ಷಣದಲ್ಲಿ ಪಿ.ಎಚ್. ಮೌಲ್ಯ ತಿಳಿಸಲಾಗುತ್ತದೆ. ರಸಗೊಬ್ಬರ, ಲಘು ಪೋಷಕಾಂಶಗಳನ್ನು ಮಣ್ಣಿಗೆ ನೀಡುವ ಬಗ್ಗೆ ಕಾಫಿ ಸಂಶೋಧನ ವಿಭಾಗದ ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.

ಬೆಳೆಗಾರರು ತಮ್ಮ ತೋಟಗಳ 3-4 ಸ್ಥಳಗಳಿಂದ ಮಣ್ಣು ತೆಗೆದು ಮಿಶ್ರಣ ಮಾಡಿ ನಾಲ್ಕರ ಒಂದು ಭಾಗದ ಮಣ್ಣನ್ನು ಬಿಳಿಬಟ್ಟೆಯಲ್ಲಿ ಸಂಗ್ರಹಿಸಿ ತರಬೇಕು. ಮಣ್ಣು ತೆಗೆಯುವಾಗ ಮರದ ಬುಡದಲ್ಲಿ ಮತ್ತು ತೇವಾಂಶವಿರುವ ಜಾಗವನ್ನು ಹೊರತುಪಡಿಸಿ ಬಿಸಿಲು ಬೀಳುವ ಜಾಗದಲ್ಲಿ ಮಣ್ಣು ತೆಗೆಯಬೇಕು. ಮಣ್ಣಿನ ಮಾದರಿಗಳನ್ನು ತರಲು ಮಿತಿ ಇಲ್ಲ. ಕಾಫಿ ಬೆಳೆಗಾರರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದರು.

ಕಾಫಿ ಬೆಳೆಗಾರರು ತಮ್ಮ ಕಾಫಿ ತೋಟದ ಜಾಗದ ಆರ್ಟಿಸಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕು. ವಾಟ್ಸ್ ಆ್ಯಪ್ ಫೋನ್ ನಂಬರ್ ನೀಡಿದರೆ, ಮಣ್ಣಿನ ಪರೀಕ್ಷೆಯ ಪೂರ್ಣ ಮಾಹಿತಿಯನ್ನು ವಾಟ್ಸ್ಆ್ಯಪ್ನಲ್ಲೇ ಕಳುಹಿಸಲಾಗುತ್ತದೆ ಎಂದು ಹೇಳಿದರು.

ಸಂಘದ ಕಾರ್ಯದರ್ಶಿ ಮನೋಹರ್, ಕಾಫಿ ಬೆಳೆಗಾರರ ಒಕ್ಕೂಟದ ಸದಸ್ಯ ಸಿ.ಕೆ.ಮಲ್ಲಪ್ಪ, ಪದಾಧಿಕಾರಿಗಳಾದ ಬಿ.ಎಸ್.ಅನಂತರಾಮ್, ಎಸ್.ಎನ್.ಸೋಮಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-51-461487846

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.