ಸೋಮವಾರಪೇಟೆ: ಪಟ್ಟಣದಲ್ಲಿ ಈಚೆಗೆ ಮದ್ಯ ಸೇವಿಸಿ ಸಾರ್ವಜನಿಕವಾಗಿ ಗಲಾಟೆ ಮಾಡಿ, ಶಾಂತಿ ಕದಡುತ್ತಿದ್ದ ಮೂವರು ಆರೋಪಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಒಂದು ದಿನದ ಸ್ವಚ್ಛತಾ ಕೆಲಸ ಮತ್ತು ₹ 1 ಸಾವಿರ ದಂಡ ವಿಧಿಸಿ ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ.

ಆರೋಪಿಗಳಾದ ಪಟ್ಟಣದ ದೀಪಕ್, ಕೌಶಿಕ್, ಕಾರ್ತಿಕ್ ಅವರನ್ನು ಪಟ್ಟಣ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಗಳು ತಪ್ಪು ಒಪ್ಪಿಕೊಂಡಿದ್ದರಿಂದ, ಬಿಎನ್ಎಸ್ 275ರಂತೆ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಗೋಪಾಲಕೃಷ್ಣ ಅವರು ಬುಧವಾರ ಶಿಕ್ಷೆ ವಿಧಿಸಿದರು. ಸೋಮವಾರಪೇಟೆ ಪೊಲೀಸ್ ಠಾಣೆ ಎಸ್ಐ ಗೋಪಾಲ್ ಸಮ್ಮುಖದಲ್ಲಿ ಆರೋಪಿಗಳು ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.