ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಸುತ್ತಮುತ್ತಲಿನ ಕೃಷಿಕರು ಕಂಗಾಲಾಗಿದ್ದಾರೆ.

ಗಣಗೂರು, ಯರಪಾರೆ, ಬಾಣಾವಾರ, ಗೋಣಿಮರೂರು ಗ್ರಾಮಗಳ ಕೃಷಿ ಭೂಮಿಗೆ ಪ್ರತಿನಿತ್ಯ ಕಾಡಾನೆಗಳು ದಾಳಿ ಮಾಡಿ, ಕೃಷಿ ಫಸಲನ್ನು ನಾಶಮಾಡುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಗೋಣಿಮರೂರು-ಯರಪಾರೆ ಗ್ರಾಮದ ಗಣೇಶ್ ಎಂಬವರ ಜೋಳದ ಫಸಲನ್ನು ಹಾನಿಪಡಿಸಿವೆ. ರಮೇಶ್ ಎಂಬುವವರ ತೆಂಗಿನ ಗಿಡಗಳನ್ನು ಮುರಿದು ತಿಂದು ನಾಶಪಡಿಸಿವೆ. ಕಾಡಾನೆ ಹಾವಳಿಯಿಂದ ಕೃಷಿ ಫಸಲನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಮಗೆ ಯಾವುದೇ ಪರಿಹಾರ ಬೇಡ. ಒಂದೆರಡು ಸಾವಿರ ಪರಿಹಾರದಿಂದ ಕುಟುಂಬ ಸಾಕಲು ಸಾಧ್ಯವಿಲ್ಲ. ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು. ಯರಪಾರೆಯಲ್ಲಿ ಒಂದೆರಡು ಕಿ.ಮೀನಷ್ಟು ಸೋಲಾರ್ ತಂತಿಬೇಲಿ ಅಳವಡಿಸಿಕೊಡಬೇಕು ಎಂದು ರೈತರಾದ ರೇವಣ್ಣ, ಹರೀಶ್ ಆಗ್ರಹಿಸಿದ್ದಾರೆ. ಕಾಡಾನೆ ಕಂದಕಗಳನ್ನು ದುರಸ್ತಿ ಪಡಿಸಬೇಕು. ಸೋಲಾರ್ ತಂತಿಬೇಲಿಯ ನಿರ್ವಹಣೆ ಮಾಡಬೇಕು. ಸಿಬ್ಬಂದಿ ಪಟಾಕಿ ಸಿಡಿಸಿ ತೆರಳಿದರೆ, ಕಾಡಾನೆ ಹಾವಳಿ ನಿಯಂತ್ರಣ ಅಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-51-110125124

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.