ಸೋಮವಾರಪೇಟೆ: ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಹಲವು ವರ್ಷಗಳ ಹೋರಾಟದ ಫಲವಾಗಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭವಾಗಿ ಒಂದು ವರ್ಷ ಪೂರೈಸಿದ್ದು, ಮುಂದಿನ ದಿನಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕೆನ್ನುವುದು ಜನರ ಬೇಡಿಕೆಯಾಗಿದೆ ಎಂದು ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಆಹಾರದ ಗುಣಮಟ್ಟ ಕುಸಿದಿದೆ. ರುಚಿಯಾದ ಆಹಾರ ನೀಡುತ್ತಿಲ್ಲ. ಇದರಿಂದ ನಿರಾಶೆಯಾಗಿದೆ. ಒಂದು ಊಟಕ್ಕೆ ರಾಜ್ಯ ಸರ್ಕಾರ ₹65 ಗಳನ್ನು ನೀಡುತ್ತಿದೆ. ಸರ್ಕಾರ ನೀಡುವ ಹಣಕ್ಕೆ ಸೂಕ್ತ ಆಹಾರವನ್ನು ಕಡ್ಡಾಯವಾಗಿ ನೀಡಬೇಕು ಎಂದು ಒತ್ತಾಯಿಸಿದರು.

ಶಾಸಕರಾದ ಡಾ.ಮಂತರ್ ಗೌಡ ಸೇರಿ ಆನೇಕರ ಸಹಕಾರದಿಂದ ಇಂದಿರಾ ಕ್ಯಾಂಟಿನ್ ಪ್ರಾರಂಭವಾಗಿದೆ. ಪಂಚಾಯಿತಿ ಅಧಿಕಾರಿಗಳು ಪ್ರತಿದಿನ ಆಹಾರದ ಗುಣಮಟ್ಟ ಪರಿಶೀಲಿಸಬೇಕು. ಈ ಬಗ್ಗೆ ಶಾಸಕರು ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದರು.

ಮಾದಾಪುರ ಸಮೀಪದ ಕುಂಬೂರು ಪೈಸಾರಿಯಲ್ಲಿ ನಿವೇಶನ ರಹಿತ ಕಾರ್ಮಿಕರು ನಿವೇಶನಕ್ಕಾಗಿ 18 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಸ್ಪಂದಿಸುತ್ತಿಲ್ಲ. ಕೂಡಲೆ ಧರಣಿ ನಿರತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಬೇಳೂರು ಬಾಣೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿಯಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಸರ್ಕಾರ ಜಾಗದ ಸರ್ವೆ ಮಾಡಿಸಿ, ಒತ್ತುವರಿ ತೆರವುಗೊಳಿಸಬೇಕೆಂದರು.

ಸಂಘದ ಕಾರ್ಯದರ್ಶಿ ಎಚ್.ಬಿ.ರಾಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ತಾಲ್ಲೂಕು ಅಧ್ಯಕ್ಷ ಎ.ಯು.ಸಂತೋಷ್, ಖಜಾಂಚಿ ಶಿವರಾಮ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-51-189766315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.