ಸೋಮವಾರಪೇಟೆ: ಕನ್ನಡ ಸಿರಿ ಸ್ನೇಹ ಬಳಗದ ಸೋಮವಾರಪೇಟೆ ತಾಲ್ಲೂಕು ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಭೆ ಸ್ನೇಹ ಬಳಗದ ಸಮಿತಿ ಅಧ್ಯಕ್ಷ ಎಚ್.ಜೆ. ಜವರಪ್ಪ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಸಮಾಜದ ಸಭಾಂಗಣದಲ್ಲಿ ಭಾನುವಾರ ನಡೆಯಿತು.

ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಏಪ್ರಿಲ್ 3ರಂದು ಮಹಿಳಾ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನೃತ್ಯ, ಹಾಡುಗಾರಿಕೆ, ನಾಟಕ, ಏಕಪಾತ್ರಾಭಿನಯ ಸೇರಿ ವಿವಿಧ ಚಟುವಟಿಕೆಗಳನ್ನು ನಡೆಸಲು ಹಾಗೂ ಸಹಕರಿಸುವ ಪ್ರತಿ ಸಂಘ ಸಂಸ್ಥೆಗೆ ಎರಡು ಕಾರ್ಯಕ್ರಮ ನೀಡಲು ಅವಕಾಶ ನೀಡಬೇಕು, ಇಬ್ಬರು ಸಾಧಕ ಮಹಿಳೆಯರಿಗೆ ಸನ್ಮಾನಿಸುವಂತೆ ಸಭೆ ನಿರ್ಧರಿಸಿತು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಘಗಳು ತಮ್ಮ ಕಾರ್ಯಕ್ರಮದ ಬಗ್ಗೆ ಮೊದಲೇ ನೋಂದಾಯಿಸಿಕೊಳ್ಳಬೇಕೆಂದು ಅಧ್ಯಕ್ಷರು ಮನವಿ ಮಾಡಿದರು.

ಕಾರ್ಯದರ್ಶಿ ಎಲ್.ಎಂ. ಪ್ರೇಮ, ಖಜಾಂಚಿ ಸಿ.ಕೆ. ಮಲ್ಲಪ್ಪ, ಹಿರಿಯ ಸಾಹಿತಿ ನ.ಲ. ವಿಜಯ ಇದ್ದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು, ಸಲಹೆ ಸೂಚನೆಗಳನ್ನು ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-51-61540742

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.